ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 20 : ಬೋಧನೆಗಿಂತ ಪ್ರಾಯೋಗಿಕ ಬೋಧನೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಪಠ್ಯದ ವಸ್ತುಗಳು ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳ ಮನಸ್ಸನ್ನು ಅರಳಿಸುತ್ತವೆ ಎಂದು ಮುಖ್ಯ ಶಿಕ್ಷಕ ಎನ್.ಎಸ್.ಮಹೇಶ್ ಅಭಿಪ್ರಾಯಪಟ್ಟರು.
ನಗರದ ಕೆಳಗೋಟೆಯ ಸಿಕೆ ಪುರದ ಶ್ರೀಮತಿ ಮೇಷ್ಟ್ರು ಬೋರಮ್ಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಶಾರದಾ ಪೂಜೆ ಹಾಗೂ ಬೋಧನಾ ಪ್ರಾಯೋಗಿಕ ತರಬೇತಿಯ ಪ್ರಶಿಕ್ಷಣಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಪ್ರಾಧ್ಯಾಪಕ ಡಾ.ಕೆ.ಮೋಹನ್ ಕುಮಾರ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು ಬೋಧನಾ ಪ್ರಕ್ರಿಯೆಯಲ್ಲಿ ಬರುವ ನಿಯಮಗಳನ್ನು ಶ್ರದ್ಧೆ ಮತ್ತು ಆಸಕ್ತಿಯಿಂದ ಬೋಧನೆಯಲ್ಲಿ ತೊಡಗಿಸಿದರೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದರು.
ಪ್ರಾಧ್ಯಾಪಕ ನಟರಾಜ್, ಸಹಶಿಕ್ಷಕಿ ಕೆಪಿ ಅನ್ನಪೂರ್ಣಮ್ಮ, ರಂಗ ನಿರ್ದೇಶಕ ಕೆಪಿಎಂ ಗಣೇಶಯ್ಯ ಮುಖ್ಯ ಅತಿಥಿಗಳಾಗಿ ಉಪಸ್ಥಿರಿದ್ದು ಮಾತನಾಡಿದರು. ಶ್ರೀ ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಾದ ತಿಪ್ಪೇಶ ಎಂ, ಪ್ರವೀಣ್ ಎ, ಮಲ್ಲಿಕಾರ್ಜುನ ಬಿಕೆ, ಸಚಿನ್ ಸಿ, ಪ್ರಹ್ಲಾದ್ ಕೆ, ಪ್ರಿಯಾಂಕ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಶ್ರೀಮತಿ ಮೇಷ್ಟ್ರು ಬೋರಮ್ಮ ಪ್ರಾಥಮಿಕ ಶಾಲೆಯ ಮಕ್ಕಳು ಜಾನಪದ ಹಾಗೂ ಕನ್ನಡ ಗೀತೆಗಳಿಗೆ ನೃತ್ಯ ಪ್ರದರ್ಶನ ನೀಡಿದರು.