ಬೆಂಗಳೂರು: ವಿಧಾನಸಭಾ ಕಲಾಪದಲ್ಲಿ ಇಂದು ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ತಮ್ಮ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಜೊತೆಗೆ ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದರು.
ಹಸಿವಿನ ಬೆಲೆ ಗೊತ್ತಿದ್ದವರಿಗೆ ಮಾತ್ರ ಇಂತಹ ಗ್ಯಾರಂಟಿಗಳನ್ನು ಹಾಗೂ ಅನ್ನ ಭಾಗ್ಯ ಯೋಜನೆಯನ್ನು ತರುವುದಕ್ಕೆ ಸಾಧ್ಯವಾಗುತ್ತದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಈ ರಾಜ್ಯದ ಭರವಸೆಗಳಿದ್ದಂತೆ. ಹೀಗಾಗಿ ನಾನು ವಿರೋಧ ಪಕ್ಷಗಳಿಗೆ ವಿನಂತಿ ಮಾಡಿಕೊಳ್ಳುತ್ತೇನೆ.
ಗ್ಯಾರಂಟಿ ಯೋಜನೆಗಳಲ್ಲಿ ಯಾರೂ ಕೂಡ ರಾಜಕೀಯ ಮಾಡಬೇಡಿ. ಇದು ಮುಖ್ಯವಾದ ಯೋಜನೆ. ಸಿದ್ರಾಮನ ಹುಂಡಿಯಲ್ಲಿ ಹುಟ್ಟಿದಂತಹ ಹುಡುಗನಿಗೆ ಹಸಿವಿನ ಬೆಲೆ ಗೊತ್ತಿತ್ತು ಎನಿಸುತ್ತದೆ. ಬಡವರ ಮಕ್ಕಳು ಬೆಳೀಬೇಕು ಕಣ್ರಯ್ಯ ಎಂದು ಯೋಜನೆಯ ಬಗ್ಗೆ ಮಾತನಾಡಿದ್ದಾರೆ.
ಇನ್ನು ಸರ್ಕಾರಿ ಆಸ್ಪತ್ರೆ ಬಗ್ಗೆ ಮಾತನಾಡಿ, ಸರ್ಕಾರಿ ಆಸ್ಪತ್ರೆ ಎಂದರೆ ನನಗೊಂದು ಭಾವುಕ. ನಾನು, ನನ್ನ ತಂದೆ, ತಾಯಿಯನ್ನು ಕಳೆದುಕೊಂಡಿದ್ದೇನೆ. ಆ ನೋವು ನನ್ನಲ್ಲಿ ಇದೆ. ಅಂದು ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಕ್ಕಿದ್ದರೆ ಅವರು ಬದುಕುಳಿಯುತ್ತಿದ್ದರು. ಆದರೆ ನನ್ನ ಬ್ಯಾಡ್ ಲಕ್. ಅಪ್ಪ ಅಮ್ಮನನ್ನು ಕಳೆದುಕೊಂಡೆ. ಆ ನೋವು ನನ್ನಲ್ಲಿ ಇನ್ನೂ ಇದೆ ಎಂದು ಭಾವುಕರಾದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












