Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪ್ರಧಾನಮಂತ್ರಿ ಕಿಸಾನ್ ಯೋಜನೆ : ರೈತರು ಇ-ಕೆವೈಸಿ ಮಾಡಿಸಲು ಕೊನೆಯ ಅವಕಾಶ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮೇ.20) : ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವು ಜಮೆಯಾಗುತ್ತಿದ್ದು, ಈ ಕುರಿತು ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು. ಇದು ಕೊನೆಯ ಅವಕಾಶ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಪಿ.ರಮೇಶ್ ಕುಮಾರ್ ಜಿಲ್ಲೆಯ ರೈತರಿಗೆ ಮನವಿ ಮಾಡಿದ್ದಾರೆ.

ಈಗಾಗಲೇ ಅನೇಕ ಬಾರಿ ಮನವಿ ಮಾಡಿದರೂ ಕೆಲವು ರೈತರು ಇ-ಕೆವೈಸಿ ಮಾಡಿಸಿರುವುದಿಲ್ಲ. ಅರ್ಹ ರೈತ ಫಲಾನುಭವಿಯು http://pmkisan.gov.in   ವೈಬ್ಸೈಟ್‍ಗೆ ಭೇಟಿ ನೀಡಿ, ಆಧಾರ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ನಮೂದಿಸಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಬಹುದು.

ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್  ನೋಂದಾಣೆಯಾಗದ ರೈತರು ಅಥವಾ ಓಟಿಸಿ ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಒನ್ ಸೇವಾ ಕೇಂದ್ರ ಅಥವಾ ಸಮಾನ್ಯ ಸೇವಾ ಕೇಂದ್ರಕ್ಕೆ (csc)  ಭೇಟಿ ನೀಡಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳಚ್ಚು ನಮೂದಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಭೇಟಿ ನೀಡಿ, ಮಾಹಿತಿ ಪಡೆದು ಇ-ಕೆವೈಸಿ ನೋಂದಾಯಿಸಲು ಜಂಟಿ ಕೃಷಿ ನಿರ್ದೇಶಕ ಪಿ. ರಮೇಶಕುಮಾರ್ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...