ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ ಪರಾರಿಯಾಗಿ ವಿದೇಶದಲ್ಲಿದ್ದಾರೆ. ಎಷ್ಟೇ ನೋಟೀಸ್ ಕೊಟ್ಟರು ದೇಶಕ್ಕೆ ಬರುವ ಮನಸ್ಸು ಮಾಡುತ್ತಿಲ್ಲ. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಿಯೋಗ ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಜೆಡಿಎಸ್ ದೂರು ನೀಡಿದೆ.
ಪ್ರಜ್ವಲ್ ರೇವಣ್ಣ ಪ್ರಕರಣ ಬೆಳಕಿಗೆ ಬಂದಾಗ ರಾಹುಲ್ ಗಾಂಧಿ, ಇದು ನಾನೂರು ಮಹಿಳೆಯರ ಮೇಲೆ ನಡೆದ ಮಾಸ್ ರೇಪ್ ಎಂದು ಹೇಳಿದ್ದರು. ಆ ಪ್ರಕರಣ ಸಂಬಂಧ ದೂರು ನೀಡಲಾಗಿದ್ದು, ಕ್ರಿಮಿನಲ್ ಕೇಸ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ. ರಂಗನಾಥ್ ಸೇರಿದಂತೆ ಹಲವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರನ್ನು ಭೇಟಿಯಾಗಿ, ದೂರು ಸಲ್ಲಿಸಿದ್ದಾರೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ ಅವರು ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಗಳಲ್ಲಿ ಮಾಸ್ ರೇಪ್ ಬಗ್ಗೆ ಮಾತನಾಡಿದ್ದರು. ಇದೇ ಮಾತನ್ನು ಮಾಧ್ಯಮಗಳ ಮುಂದೆಯೂ ಹೇಳಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ತಿಳಿಸಿದ್ದಾರೆ. ಈ ದೂರಿನ ಪತ್ರಕ್ಕೆ ಹೆಚ್.ಎಂ. ರಮೇಶ್ ಗೌಡ ಸಹಿ ಕೂಡ ಹಾಕಿದ್ದಾರೆ. ರಾಹುಲ್ ಗಾಂಧಿ ಅವರ ಹೇಳಿಕೆ ವಿದ್ಯುನ್ಮಾನ ಹಾಗೂ ಪ್ರಿಂಟ್ ಮಾಧ್ಯಮದಲ್ಲಿಯೂ ಮುದ್ರಣವಾಗಿದೆ. ಹೀಗಾಗಿ ಅವರ ಮೇಕೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.