Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಜ್ವಲ್ ರೇವಣ್ಣ ತೀರ್ಪು ಆಗಸ್ಟ್ 1 ಪ್ರಕಟ

---Advertisement---

ಬೆಂಗಳೂರು: ಕಳೆದ 14 ತಿಂಗಳಿನಿಂದ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣನಿಗೆ ಇಂದಾದರೂ ಮುಕ್ತಿ ಅಇಗಬಹುದು ಎಂದುಕೊಳ್ಳಲಾಗಿತ್ತು. ಆದರೆ ಕೋರ್ಟ್ ಇಂದು ಕೂಡ ತೀರ್ಪನ್ನ ಕಾಯ್ದಿರಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದರು. ಇದೀಗ ಆಗಸ್ಟ್ 1ಕ್ಕೆ ತೀರ್ಪು ಮುಂದೂಡಿಕೆ ಮಾಡಲಾಗಿದೆ.

ಕೆ ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದು. ಈಗಾಗಲೇ ಈ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರು 26 ಸಾಕ್ಷಿಗಳ ವಿಚಾರಣೆಯನ್ನ ನಡೆಸಿದ್ದಾರೆ. ಇಂದಿಗೆ ತೀರ್ಪನ್ನ ಕಾಯ್ದಿರಿಸಲಾಗಿತ್ತು. 14 ತಿಂಗಳಿನಿಂದ ಸೆರೆವಾಸದಲ್ಲಿಯೇ ಇರುವ ಪ್ರಜ್ವಲ್ ರೇವಣ್ಣರಿಗೆ ಇಂದು ಮಹತ್ವದ ದಿನವಾಗಿದೆ. ಇದು ರಾಜಕೀಯ ಭವಿಷ್ಯಕ್ಕೂ ಮುಖ್ಯವಾಗಿದೆ. ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಓಡಾಡಿತ್ತು. ಅದಾದ ಬಳಿಕ ಹಲವು ಕೇಸ್ ಗಳು ದಾಖಲಾಗಿದ್ದವು.

ಕಳೆದ 14 ತಿಂಗಳಿನಿಂದ ಜೈಲಿನಲ್ಲಿಯೇ ವಾಸವಿರುವ ಪ್ರಜ್ವಲ್ ರೇವಣ್ಣರಿಗೆ ರಾಜಕೀಯ ಭವಿಷ್ಯದ್ದೇ ಚಿಂತೆ ಆಗಿದೆ. ಅವರ ಸಹೋದರ ಕೂಡ ಕೇಸಲ್ಲಿ ಜೈಲು ಪಾಲಾಗಿದ್ದರು ಬೇಗ ಜಾಮೀನಿನ ಮೇಲೆ ಬಂದರು. ಆದರೆ ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ಸಿಗುವುದೇ ಸಂಕಷ್ಟವಾಗಿ ಪರಿಣಮಿಸಿದೆ. ಆಗಸ್ಟ್ 1ರಂದು ಯಾವ ತೀರ್ಪು ಬರಲಿದೆ ಎಂಬುದನ್ನ ಕಾದು ನೋಡಬೇಕಿದೆ. ಎಲ್ಲರ ಚಿತ್ತ ಸ
ಆಗಸ್ಟ್ 1ರತ್ತ ನೆಟ್ಟಿದೆ. ಒಂದು ವೇಳೆ ಜಾಮೀನು ಸಿಕ್ಕರೆ ಸ್ವಲ್ಪ ಸಮಯ ವಿಶ್ರಾಂತಿ ಪಡೆದು ಮತ್ತೆ ಪ್ರಜ್ವಲ್ ರೇವಣ್ಣ ರಾಜಕೀಯಕ್ಕೆ ಮರಳಬಹುದು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment