Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶುಕ್ರವಾರ ಮಧ್ಯರಾತ್ರಿ ಬೆಂಗಳೂರಿಗೆ ಬರುವ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗುತ್ತಾರಾ..?

---Advertisement---

ಬೆಂಗಳೂರು: ರಾಜ್ಯದೆಲ್ಲೆಡೆ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರವೇ ಸಾಕಷ್ಟು ಸದ್ದು ಮಾಡುತ್ತಿದೆ. ಸಾಮಾನ್ಯ ಜನರ ಮೊಬೈಲ್ ಗಳಲ್ಲೂ ಹೆಣ್ಣು ಮಕ್ಕಳ ಅಶ್ಲೀಲ ಫೋಟೋ ಓಡಾಡುತ್ತಿವೆ. ಇದೊಂದು ಗಂಭೀರ ಪ್ರಕರಣವಾಗಿದೆ. ಆದರೆ ಪ್ರಜ್ವಲ್ ರೇವಣ್ಣ ಈ ಪ್ರಕರಣ ಬೆಳಕಿಗೆ ಬಂದಾಗಲೇ ವಿದೇಶಕ್ಕೆ ಹಾರಿದ್ದರು. ಜರ್ಮನಿಯಲ್ಲಿ ಇದ್ದಾರೆ. ಇದೀಗ ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ಬೆಂಗಳೂರಿಗೆ ಬರುತ್ತಿದ್ದಾರೆ.

ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ ಐಟಿ ತನಿಖೆಗೆ ವಹಿಸಿದೆ. ಈಗಾಗಲೇ ನಾನಾ ಆಯಾಮದಿಂದ ತನಿಖೆ ಕೂಡ ನಡೆಯುತ್ತಿದೆ. ವಿಡಿಯೋದಲ್ಲಿರುವವರ ಮಹಿಳೆಯರನ್ನು ಕರೆಸಿ ತನಿಖೆ ನಡೆಸಲಾಗಿದೆ. ಆದರೆ ಈ ಸಂಬಂಧ ಪ್ರಜ್ವಲ್ ರೇವಣ್ಣ ಅವರದ್ದೇ ತನಿಖೆಯಾಗಿಲ್ಲ.

ಪ್ರಜ್ವಲ್ ರೇವಣ್ಣ ಜರ್ಮನಿಯ ಫ್ರಾಂಕ್ ಫರ್ಟ್ ನಲ್ಲಿರುವ ವಿಚಾರ ಬೆಳಕಿಗೆ ಬಂದಿದೆ. ಬೆಂಗಳೂರಿಗೆ ಅಲ್ಲಿಂದಾನೆ ಟಿಕೆಟ್ ಬುಕ್ ಮಾಡಿದ್ದು, ಮೇ 3 ಅಂದರೆ ಶುಕ್ರವಾರ ಮಧ್ಯರಾತ್ರಿ ಬಂದಿಳಿಯಲಿದ್ದಾರೆ.

ಈಗಾಗಲೇ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ಇಬ್ಬರಿಗೂ ನೋಟೀಸ್ ನೀಡಿದ್ದಾರೆ. ಮನೆಗೆ ಹೋಗಿ ನೋಟೀಸ್ ಅಂಟಿಸಿ ಬಂದಿದ್ದಾರೆ. ಬೆಂಗಳೂರಿನಿಂದ ಬಂದ ಮೇಲೆ ವಿಚಾರಣೆ ನಡೆಸುವ ಸಾಧ್ಯತೆ ಇದೆ‌.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...