Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದಿನ ತೀರ್ಪಿನಲ್ಲಿ ಅಡಗಿದೆ ಪ್ರಜ್ವಲ್ ರಾಜಕೀಯ ಜೀವನ : ಅಪರಾಧಿ ಎಂದಾದರೆ..?

---Advertisement---

 

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ರಾಜಕೀಯ ಭವಿಷ್ಯ ಇಂದಿನ ತೀರ್ಪಿನ ಮೇಲೆ ನಿಂತಿದೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ತೀರ್ಪು ಪ್ರಕಟ ಮಾಡಲಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಕೇಸುಗಳು ದಾಖಲಾಗಿದ್ದು, ಅದರಲ್ಲಿ ಒಂದು ಕೇಸಿನ ತೀರ್ಪು ಪ್ರಕಟವಾಗಲಿದೆ. ಈಗಾಗಲೇ ಈ ಕೇಸಿನಲ್ಲಿ ವಾದ ಪ್ರತಿವಾದ ನಡೆದಿದೆ. ಇಂದಿಗೆ ತೀರ್ಪನ್ನ ಕಾಯ್ದಿರಿಸಿತ್ತು. ಒಂದು ವೇಳೆ ಈ ಕೇಸಲ್ಲಿ ಪ್ರಜ್ವಲ್ ಅಪರಾಧಿ ಎಂದು ತೀರ್ಪು ಬಂದರೆ ರಾಜಕೀಯ ಭವಿಷ್ಯಕ್ಕೆ ಹೊಡೆತ ಬೀಳಲಿದೆ.

ಒಂದು ವೇಳೆ ಕೋರ್ಟ್ ನಲ್ಲಿ ಅಪರಾಧಿ ಎಂದೇನಾದ್ರೂ ಪ್ರಕಟವಾದ್ರೆ, ತೀರ್ಪಿನ ಬಳಿಕ ಶಿಕ್ಷೆಯ ಪ್ರಮಟಣವನ್ನು ನ್ಯಾಯಾಲಯ ಪ್ರಕಟಿಸಬೇಕಾಗುತ್ತದೆ. ಮದ್ರೆ ಶಿಕ್ಷೆಯ ಪ್ರಮಾಣದ ಬಗ್ಗೆಯು ಕೋರ್ಟ್ ವಾದ ಪ್ರತಿವಾದವನ್ನು ಆಲಿಸಲಿದೆ. ಗರಿಷ್ಠ ಶಿಕ್ಷೆ ವಿಧಿಸಬೇಕು ಅಂತ ಪ್ರಾಸಿಕ್ಯೂಷನ್ ಪರ ವಕೀಲರ ವಾದ ಮಂಡಿಸಲಿದ್ದಾರೆ. ಕಡಿಮೆ ಶಿಕ್ಷೆ ನೀಡಿ ಅಂತ ಪ್ರಜ್ವಲ್ ರೇವಣ್ಣ ಪರ ವಕೀಲರು ಮನವಿ ಮಾಡುವ ಸಾಧ್ಯತೆಯೂ ಇದೆ.

ಇಂದಿನ ಮಹತ್ವದ ತೀರ್ಪು ಬರಬೇಕಿರುವುದು ಕೆ ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದು. ಈಗಾಗಲೇ ಈ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರು 26 ಸಾಕ್ಷಿಗಳ ವಿಚಾರಣೆಯನ್ನ ನಡೆಸಿದ್ದಾರೆ. ಇಂದಿಗೆ ತೀರ್ಪನ್ನ ಕಾಯ್ದಿರಿಸಲಾಗಿತ್ತು. 14 ತಿಂಗಳಿನಿಂದ ಸೆರೆವಾಸದಲ್ಲಿಯೇ ಇರುವ ಪ್ರಜ್ವಲ್ ರೇವಣ್ಣರಿಗೆ ಇಂದು ಮಹತ್ವದ ದಿನವಾಗಿದೆ. ಇದು ರಾಜಕೀಯ ಭವಿಷ್ಯಕ್ಕೂ ಮುಖ್ಯವಾಗಿದೆ. ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಓಡಾಡಿತ್ತು. ಅದಾದ ಬಳಿಕ ಹಲವು ಕೇಸ್ ಗಳು ದಾಖಲಾಗಿದ್ದವು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment