ಚೈತ್ರಾ ಪರ ಬ್ಯಾಟ್ ಬೀಸಿದ ಪ್ರಮೋದ್ ಮುತಾಲಿಕ್..!

1 Min Read

ಧಾರವಾಡ: ಉದ್ಯಮಿಯೊಬ್ಬರಿಗೆ 5 ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿರುವ ಚೈತ್ರಾಗೆ ಅನಾರೋಗ್ಯವೂ ಕಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಹೊರಗೆ ಬರುತ್ತಿವೆ. ಇದೀಗ ಚೈತ್ರಾ ಕುಂದಾಪುರ ಪರ ಪ್ರಮೋದ್ ಮುತಾಲಿಕ್ ಬ್ಯಾಟ್ ಬೀಸಿದ್ದಾರೆ.

ಚೈತ್ರಾ ಕುಂದಾಪುರ ಈ ವಂಚನೆ ಮಾಡಿಲ್ಲ ಎಂಬ ನಂಬಿಕೆ ಇದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ತನಿಖೆಯಾಗಲಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಎಲ್ಲೋ ಒಂದು ಕಡೆ ಷಡ್ಯಂತ್ರ ನಡೆದಿದೆ ಎನಿಸುತ್ತಿದ. ಚೈತ್ರಾ ಷಡ್ಯಂತ್ರಕ್ಕೆ ಒಳಗಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಿಂದೂ ಕಾರ್ಯಕರ್ತರನ್ನು ಸಿಲುಕಿಸುವ ಹುನ್ನಾರ ನಡೆಯುತ್ತಿದೆ ಎನಿಸುತ್ತಿದೆ.

ಭಜರಂಗದಳದವರನ್ನು ಬ್ಯಾನ್ ಮಾಡುತ್ತೇವೆ, ಗೋಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸ್ ಪಡೆಯುತ್ತೇವೆ ಎಂಬ ಭರವಸೆಗಳನ್ನು ಕಾಂಗ್ರೆಸ್ ನವರು ತಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದರು. ಭಜರಂಗದಳ ಒಂದು ನೆಪ ಮಾತ್ರ. ಹಿಂದೂಪರ ಸಂಘಟನೆಗಳನ್ನೇ ಮಾಡುತ್ತಿದ್ದಾರೆ. ಪುನೀತ್ ಕೆರೆಹಳ್ಳಿ ಮೇಲೆ ಗುಂಡಾ ಕಾಯ್ದ ಹಾಕಲಾಗಿದೆ. ಈ ಕಾಯ್ದೆ ಹಾಕುವ ಅವಶ್ಯಕತೆ ಇರಲಿಲ್ಲ. ರಾಜ್ಯದಲ್ಲಿ ಇನ್ನು ಅನೇಕ ಹಿಂದೂ ಕಾರ್ಯಕರ್ತರ ವಿರುದ್ಧ ಈ ಬಾರಿ ರೀತಿ ಪಿತೂರಿ ನಡೆಯುತ್ತಿದೆ ಎಂದಿದ್ದಾರೆ.

ಚೈತ್ರಾ ಕುಂದಾಪುರ ಹಿಂದೆ ಸಂಶಯಾಸ್ಪದ ಚಟುವಟಿಕೆಗಳು ನಡೆದಿವೆ. ಕೋರ್ಟ್ ಏನು ತೀರ್ಪು ಕೊಡುತ್ತೆ ಅದಕ್ಕೆ ನಾವೂ ಬದ್ಧರಾಗಿದ್ದೇವೆ. ಹಾಲಪ್ಪಾಜಿ ಅವರ ಹೆಸರು ಈ ಪ್ರಕರಣದಲ್ಲಿ ಕೇಳಿ ಬಂದಿದೆ. ಆ ಸ್ವಾಮೀಜಿಯವರನ್ನು ನಾವೂ ಹತ್ತಿರದಿಂದ ನೋಡಿದ್ದೇವೆ. ಅವರದ್ದು ದೊಡ್ಡ ಮಠ. ಅವರೂ ನಿರ್ದೋಷಿಯಾಗಿ ಹೊರ ಬರುತ್ತಾರೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *