ರಾಯಚೂರು: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ 2023 ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ನಿರ್ಧರಿಸಿದ್ದಾರೆ. ಉಡುಪಿಯ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ. ಇದೀಗ ಶ್ರೀರಾಮ ಸೇನೆ ಕಾರ್ಯಕರ್ತರು, ಬಿಜೆಪಿಗೆ ಮನವಿ ಮಾಡಿದ್ದಾರೆ. ಕಾರ್ಕಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಹಾಕಬೇಡಿ ಎಂದಿದ್ದಾರೆ.
ರಾಯಚೂರು ನಗರದ ಶ್ರೀರಾಮಸೇನೆ ಮುಖಂಡರು ಮನವಿ ಮಾಡಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಹಾಕದೆ ಇದ್ದಲ್ಲಿ ಪ್ರಮೋದ್ ಮುತಾಲಿಕ್ ಅವರಿಗೆ ಗೆಲುವು ಖಚಿತ. ಕಾರ್ಕಳದಲ್ಲಿ ಬಿಜೆಪಿ ಅಭ್ಯರ್ಥಿ ಹಾಕಬಾರದು. ಕೋಟಿ ಕೋಟಿ ಖರ್ಚು ಮಾಡಿ, ಚುನಾವಣೆ ಎದುರಿಸುವ ಸ್ಥಿತಿಯಲ್ಲಿ ಇಲ್ಲ. ಕಾರ್ಯಕರ್ತರೇ ಗೆಲ್ಲಿಸುತ್ತೇವೆ ಎಂದಿದ್ದಾರೆ.
ಸದ್ಯ ಹಾಲಿ ಶಾಸಕರಾಗಿರುವ ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಅಭ್ಯರ್ಥಿಯನ್ನು ಹಾಕಿದರೂ ಮತಗಳು ಡಿವೈಡ್ ಆಗಲಿದೆ. ಮುತಾಲಿಕ್ ಸ್ಪರ್ಧೆಯಿಂದ ಬಿಜೆಪಿಗೆ ಇದು ತಲೆನೋವಾಗಿದೆ. ಬಿಜೆಪಿಯಿಂದ ಟಿಕೆಟ್ ಕೊಟ್ಟರೂ ನಮಗೆ ಖುಷಿ ಎಂದಿದ್ದಾರೆ. ಕಿಡದೆ ಹೋದಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದ್ದಾರೆ. ವೋಟುಗಳು ಚೆಲ್ಲಾಪಿಲ್ಲಿಯಾಗುವ ಸಾಧ್ಯತೆ ಇದೆ.