Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅ.01 ಮತ್ತು 02 ರಂದು ಪ್ರಸನ್ನ ವೆಂಕಟರಮಣಸ್ವಾಮಿ ಕಲ್ಯಾಣೋತ್ಸವ ಮತ್ತು ಬ್ರಹ್ಮರಥೋತ್ಸವ

---Advertisement---

 

ಚಿತ್ರದುರ್ಗ. ಸೆ.30: ಮುಜುರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ನಿರ್ವಹಣೆಯಲ್ಲಿರುವ ನಗರದ ತುರುವನೂರು ರಸ್ತೆಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಅಕ್ಟೋಬರ್ 1 ಬುಧವಾರ ಆಯುಧ ಪೂಜಾ ದಿನದಂದು ಕಲ್ಯಾಣೋತ್ಸವ ಹಾಗೂ ಅಕ್ಟೋಬರ್ 2 ಗುರುವಾರ ವಿಜಯದಶಮಿ ದಿನದಂದು ಬ್ರಹ್ಮರಥೋತ್ಸವ ನಡೆಯಲಿದೆ.

ಅಕ್ಟೋಬರ್ 22 ರಿಂದಲೇ ದೇವಸ್ಥಾನದಲ್ಲಿ ಪ್ರತಿದಿನ ವಿಶೇಷ ಕಾರ್ಯಕ್ರಮಗಳು ನಡೆಯುತ್ತಿವೆ. ಅಕ್ಟೋಬರ್ 1 ರಂದು ಬೆಳಿಗ್ಗೆ 11 ರಿಂದ 1 ಗಂಟೆಯ ವರೆಗೆ ಸಲ್ಲುವ ಶುಭ ಲಗ್ನದಲ್ಲಿ ಶ್ರೀ ಪದ್ಮಾವತಿ ಹಾಗೂ ಶ್ರೀ ಲಕ್ಷೀ ಸಮೇತ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವರ ಕಲ್ಯಾಣೋತ್ಸವ ಜರುಗಲಿದೆ. ಮಹಾಮಂಗಳಾರತಿ ನಂತರ ಭಕ್ತಾದಿಗಳಿಗೆ ಪ್ರಸಾದ ಸಂರ್ತಪಣೆ ನಡೆಯಲಿದೆ.
ಅಕ್ಟೋಬರ್ 2 ರಂದು ರಥಾಂಗ ಹೋಮ, ಬಲಿ ಹರಣ ನಂತರ ಬೆಳಿಗ್ಗೆ 11ಕ್ಕೆ ಪ್ರಕಾರೋತ್ಸವ ಹಾಗೂ ಮಧ್ಯಾಹ್ನ 12 ರಿಂದ 1:30ಕ್ಕೆ ಸಲ್ಲುವ ಶುಭ ಅಭಿಜಿನ್ ಮಹೂರ್ತದಲ್ಲಿ ಶ್ರೀ ಸ್ವಾಮಿಯ ಬ್ರಹ್ಮ ರಥೋತ್ಸವ ಜರುಗಲಿದೆ. ಸಂಜೆ 5 ರಿಂದ 6:30 ವರೆಗೆ ಅಶ್ವವಾಹನೋತ್ಸವ ಮತ್ತು ಶಮಿ ಪೂಜೆಯನ್ನು ತಹಶೀಲ್ದಾರ್ ಹಾಗೂ ತಾಲ್ಲೂಕು ಮುಜುರಾಯಿ ಅಧಿಕಾರಿಗಳು ಸಲ್ಲಿಸಲಿದ್ದಾರೆ.

ಅಕ್ಟೋಬರ್ 3 ರಂದು ಬೆಳಿಗೆಗೆ 8 ರಿಂದ 10 ಗಂಟೆಗೆ ಶ್ರೀ ಸ್ವಾಮಿಯವರ ಊಂಜಲ್ ಸೇವೆ(ತೊಟ್ಟಿಲ ಸೇವೆ) ಮಧ್ಯಾಹ್ನ ಅವಭೃತ ಸೇವೆ, ಸಂಜೆ ಧ್ವಜಾ ಅವರೋಹಣ ರಾತ್ರಿ 8 ಗಂಟೆಗೆ ಶಯನೋತ್ಸವ ಕಾರ್ಯಕ್ರಮಗಳು ನಡೆಯಲಿವೆ
ಭಕ್ತಾಧಿಗಳು ಪಾಲ್ಗೊಂಡು ಭಗವಂತನ ಕೃಪೆ ಪಾತ್ರರಾಗುವಂತೆ ತಹಶೀಲ್ದಾರ್ ಗೋವಿಂದರಾಜ್.ಬಿ.ಎ. ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...