ಮೈಸೂರು: 2025ರ ದಸರಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡುವುದಕ್ಕೆ ರಾಜ್ಯ ಸರ್ಕಾರ ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ ಅವರನ್ನ ಆಯ್ಕೆ ಮಾಡಲಾಗಿದೆ. ಈ ಸಂಬಂಧ ಮಾಜಿ ಸಂಸದ ಪ್ರತಾಪ್ ಸಿಂಹ ಗರಂ ಆಗಿದ್ದಾರೆ.
ದಸರಾ 100% ಧಾರ್ಮಿಕ ಆಚರಣೆಯಾಗಿದೆ. ನವರಾತ್ರಿ ಉತ್ಸವ ನಡೆಯುತ್ತದೆ. ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ಕೊಡಲಾಗುತ್ತೆ. ಬಾನು ಮುಷ್ತಾಕ್ ಗೆ ತಾಯಿ ಚಾಮುಂಡಿ ಮೇಲೆ ನಂಬಿಕೆ ಇದೆಯಾ..? ಸಾಹಿತಿ ಭಾನು ಮುಷ್ತಾಕ್ ಚಾಮುಂಡಿ ಭಕ್ತೆ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಘೋಷಣೆ ಮಾಡಿದರೆ ನಮಗೆ ಯಾವುದೇ ತಕರಾರು ಇಲ್ಲ. ಧಾರ್ಮಿಕ ನಂಬಿಕೆ ವಿರೋಧಿಗಳನ್ನೇ ಯಾಕೆ ಸಿಎಂ ಕರೆಯುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ.
ಮಹಾರಾಜರ ಪರಂಪರೆಯನ್ನು ಸಿಎಂ ಹೀಗೆ ಹಾಳು ಮಾಡುತ್ತಿದ್ದಾರೆ. ರಿಷಬ್ ಶೆಟ್ಟಿಗೆ ರಾಷ್ಟ್ರೀಯ ಪ್ರಶಸ್ತಿ ಬಂತು. ಅವರನ್ನು ಕರೆಯುತ್ತೀರಾ..? ಪ್ರಶಸ್ತಿ ಬಂದವರನ್ನೆಲ್ಲಾ ದಸರಾ ಉದ್ಘಾಟನೆಗೆ ಕರೆಯುವುದಕ್ಕೆ ಆಗುತ್ತಾ..? ಪ್ರತಿಷ್ಠಿತ ಪ್ರಶಸ್ತಿ ಪಡೆದಿರುವುದಕ್ಕೆ ಬಾನು ಮುಷ್ತಾಕ ಅವರಿಗೆ ನನ್ನ ಕಡೆಯಿಂದಾನು ಅಭಿನಂದನೆಗಳು. ಈ ಪ್ರಶಸ್ತಿಯನ್ನು ಪಡೆದಿರುವ ಮೊದಲ ಕನ್ನಡತಿಯಾಗಿರುವ ಕಾರಣ ಬಹಳಷ್ಟು ಹೆಮ್ಮೆ ಇದೆ. ಸಿದ್ದರಾಮಯ್ಯ ಸರ್ಕಾರ ನಿಮ್ಮನ್ನ ದಸರಾ ಉದ್ಘಾಟನೆಗೆ ಆಹ್ವಾನ ಮಾಡಿದೆ. ನೀವೂ ಕೂಡ ಒಪ್ಪಿಕೊಂಡಿದ್ದೀರಿ. ನೀವೂ ಮುಸಲ್ಮಾನರು ಎಂಬ ಕಾರಣಕ್ಕೆ ಖಂಡಿತ ನಾನು ಅಪಸ್ವರ ಎತ್ತುತ್ತಿಲ್ಲ. ಆದರೆ ಇದು ದಸರಾ ಹಬ್ಬ ಇದೆಯಲ್ಲ ಜಾತ್ಯಾತೀತೆಯ ಪ್ರತೀಕ ಅಲ್ಲ ಇದೊಂದು ಧಾರ್ಮಿಕ ಆಚರಣೆ ಎಂದು ಹೇಳುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.






