ಮೈಸೂರು: ಇಡೀ ರಾಜ್ಯಕ್ಕೆ ಶಾಕ್ ಕೊಟ್ಟ ಸುದ್ದಿ ಎಂದರೆ ಅದು ಪ್ರಜ್ವಲ್ ರೇವಣ್ಣ ಸುದ್ದಿ. ಸಾವಿರಾರು ಅಶ್ಲೀಲ ವಿಡಿಯೋಗಳು ಅವರ ಮೊಬೈಲ್ ನಲ್ಲಿತ್ತು. ಅತ್ಯಾಚಾರ ಕೇಸಲ್ಲಿ ಸದ್ಯ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿದೆ. ಆದರೆ ಇದರ ನಡುವೆ ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್ ಅವರು ಪ್ರತಾಪ್ ಸಿಂಹ ಮೊಬೈಲ್ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.
ಮಡಿಕೇರಿಯಲ್ಲಿ ಮಾತನಾಡಿದ ಲಕ್ಷ್ಮಣ್ ಅವರು, ಬಿಜೆಪಿ ಮಾಜಿ ಸಂಸದರಾದ ಪ್ರತಾಪ್ ಸಿಂಹ ಅವರ ಮೊಬೈಲ್ ಫೋನ್ ನಲ್ಲಿ ಸಂಗ್ರಹವಾಗಿರುವ ಫೋಟೋ ಮತ್ತು ವಿಡಿಯೋಗಳ ಬಗ್ಗೆ ತನಿಖೆ ನಡೆಸಿದ್ದೇ ಆದರೆ ಪ್ರಜ್ವಲ್ ರೇವಣ್ಣ ಅವರಂತೆ ಅವರಿಗೂ ಜೈಲು ಶಿಕ್ಷೆಯಾಗುತ್ತೆ. 2023ರಲ್ಲಿ ಸಂಸತ್ತಿನ ಭದ್ರತಾ ಉಲ್ಲಂಘನೆ ಆಗಿತ್ತು. ಈ ಘಟನೆ ಆದ ನಂತರ ಪ್ರತಾಪ್ ಸಿಂಹ ಅವರ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಪ್ರತಾಪ್ ಸಿಂಹ ಮೊಬೈಲ್ ನಲ್ಲಿ ಬೆತ್ತಲೆ ಫೋಟೋಗಳು ಹಾಗೂ ವಿಡಿಯೋಗಳು ಪತ್ತೆಯಾಗಿದ್ದವು. ಇದನ್ನು ನೋಡಿ ಅಮಿತ್ ಶಾ ಅವರೇ ಶಾಕ್ ಆಗಿದ್ದರು. ಈ ಸಂಬಂಧ ನನ್ನ ಬಳಿ ಸಾಕ್ಷಿ ಇದೆ ಎಂದು ಹೇಳಿದ್ದಾರೆ.
ಇಂತಹ ಪ್ರತಾಪ್ ಸಿಂಹ ನಮ್ಮ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಪ್ರದೀಪ್ ಈಶ್ವರ್ ಅವರನ್ನು ನಿಂದಿಸುವುದೇ ದೊಡ್ಡ ಕೆಲಸಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಪ್ರತಾಪ್ ಸಿಂಹ ಅವರನ್ನ ಬ್ಲೂ ಬಾಯ್ ಅಂತಾನೇ ಕರೆಯುತ್ತಾರೆ. ಆ ವಿಡಿಯೋಗಳಿದ್ದ ಕಾರಣಕ್ಕೆ ಪ್ರತಾಪ್ ಸಿಂಹ ಮೊಬೈಲ್ ಜಪ್ತಿ ಮಾಡಿಸಿದ್ದರು. ಇದೇ ಕಾರಣಕ್ಕೆ ಬಿಜೆಪಿ ನಾಯಕರು ಪ್ರತಾಪ್ ಸಿಂಹಗೆ ಕಳೆದ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಬಾರದು ಎಂದು ನಿರ್ಧರಿಸಿದರು ಎಂದಿದ್ದಾರೆ.
