Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರತಾಪ್ ಸಿಂಹ ಫೋನ್ ನಲ್ಲೂ ಬೆತ್ತಲೆ ಫೋಟೋ, ವಿಡಿಯೋ ಇದಾವೆ : ಎಂ. ಲಕ್ಷ್ಮಣ್ ಹೊಸ ಬಾಂಬ್

---Advertisement---

 

ಮೈಸೂರು: ಇಡೀ ರಾಜ್ಯಕ್ಕೆ ಶಾಕ್ ಕೊಟ್ಟ ಸುದ್ದಿ ಎಂದರೆ ಅದು ಪ್ರಜ್ವಲ್ ರೇವಣ್ಣ ಸುದ್ದಿ. ಸಾವಿರಾರು ಅಶ್ಲೀಲ ವಿಡಿಯೋಗಳು ಅವರ ಮೊಬೈಲ್ ನಲ್ಲಿತ್ತು. ಅತ್ಯಾಚಾರ ಕೇಸಲ್ಲಿ ಸದ್ಯ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿದೆ. ಆದರೆ ಇದರ ನಡುವೆ ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್ ಅವರು ಪ್ರತಾಪ್ ಸಿಂಹ ಮೊಬೈಲ್ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿದ ಲಕ್ಷ್ಮಣ್ ಅವರು, ಬಿಜೆಪಿ ಮಾಜಿ ಸಂಸದರಾದ ಪ್ರತಾಪ್ ಸಿಂಹ ಅವರ ಮೊಬೈಲ್ ಫೋನ್ ನಲ್ಲಿ ಸಂಗ್ರಹವಾಗಿರುವ ಫೋಟೋ ಮತ್ತು ವಿಡಿಯೋಗಳ ಬಗ್ಗೆ ತನಿಖೆ ನಡೆಸಿದ್ದೇ ಆದರೆ ಪ್ರಜ್ವಲ್ ರೇವಣ್ಣ ಅವರಂತೆ ಅವರಿಗೂ ಜೈಲು ಶಿಕ್ಷೆಯಾಗುತ್ತೆ. 2023ರಲ್ಲಿ ಸಂಸತ್ತಿನ ಭದ್ರತಾ ಉಲ್ಲಂಘನೆ ಆಗಿತ್ತು. ಈ ಘಟನೆ ಆದ ನಂತರ ಪ್ರತಾಪ್ ಸಿಂಹ ಅವರ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಪ್ರತಾಪ್ ಸಿಂಹ ಮೊಬೈಲ್ ನಲ್ಲಿ ಬೆತ್ತಲೆ ಫೋಟೋಗಳು ಹಾಗೂ ವಿಡಿಯೋಗಳು ಪತ್ತೆಯಾಗಿದ್ದವು. ಇದನ್ನು ನೋಡಿ ಅಮಿತ್ ಶಾ ಅವರೇ ಶಾಕ್ ಆಗಿದ್ದರು. ಈ ಸಂಬಂಧ ನನ್ನ ಬಳಿ ಸಾಕ್ಷಿ ಇದೆ ಎಂದು ಹೇಳಿದ್ದಾರೆ.

ಇಂತಹ ಪ್ರತಾಪ್ ಸಿಂಹ ನಮ್ಮ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಪ್ರದೀಪ್ ಈಶ್ವರ್ ಅವರನ್ನು ನಿಂದಿಸುವುದೇ ದೊಡ್ಡ ಕೆಲಸ‌ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಪ್ರತಾಪ್ ಸಿಂಹ ಅವರನ್ನ ಬ್ಲೂ ಬಾಯ್ ಅಂತಾನೇ ಕರೆಯುತ್ತಾರೆ. ಆ ವಿಡಿಯೋಗಳಿದ್ದ ಕಾರಣಕ್ಕೆ ಪ್ರತಾಪ್ ಸಿಂಹ ಮೊಬೈಲ್ ಜಪ್ತಿ ಮಾಡಿಸಿದ್ದರು. ಇದೇ ಕಾರಣಕ್ಕೆ ಬಿಜೆಪಿ ನಾಯಕರು ಪ್ರತಾಪ್ ಸಿಂಹಗೆ ಕಳೆದ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಬಾರದು ಎಂದು ನಿರ್ಧರಿಸಿದರು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment