ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು, ನವೆಂಬರ್. 04 : ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿಗಳು ಸಂಪೂರ್ಣ ಮುಸ್ಲಿಂ ಆಗಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರೊಬ್ಬ ಮಹಾನ್ ಕೋಮುವಾದಿ. ಕೋಮುವಾದಿಗಳಿಂದ ಇನ್ನೇನು ನಿರೀಕ್ಷೆ ಮಾಡಲಾಗುತ್ತದೆ ಎಂದರು. ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ ಕೋಮುವಾದ ಮಾಡುವುದೇ ಅವರ ಕಸುಬು. ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ಒಡೆಯುವುದೇ ಅವರ ರಾಜಕಾರಣ. ಕೋಮುವಾದದಲ್ಲಿ ತೊಡಗಿ ರಾಜಕೀಯದಲ್ಲಿ ಬದುಕಲು ಹಾಗು ಮತ ಪಡೆಯಲು ಪ್ರಯತ್ನ ಮಾಡುತ್ತಾರೆ ಎಂದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯಲ್ಲವೇ ?
ಅಭಿವೃದ್ಧಿ ಬಗ್ಗೆ ಚರ್ಚೆ ಯಾರೊಬ್ಬರೂ ಮಾಡುತ್ತಿಲ್ಲ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯಲ್ಲವೇ? ಹಿಂದೆ ಸಿಎಂ ಆಗಿದ್ದಾಗ 165 ಭರವಸೆ ಕೊಟ್ಟು 158 ಭರವಸೆಗಳನ್ನು ಈಡೇರಿಸಿದೆವು..ಅವು ಅಭಿವೃದ್ಧಿಯಲ್ಲವೆ ಎಂದು ಪ್ರಶ್ನಿಸಿದರು 3 ಲಕ್ಷದ 71 ಸಾವಿರ ಕೋಟಿ ರೂಪಾಯಿಗಳಲ್ಲಿ 52 ಸಾವಿರ ಕೋಟಿ ಗ್ಯಾರಂಟಿಗಳಿಗೆ ವೆಚ್ಚ ಮಾಡುತ್ತಿದ್ದೇವೆ. ಸುಮಾರು 60 ಸಾವಿರ ಕೋಟಿ ಅಭಿವೃದ್ಧಿಗೆ ವೆಚ್ಚ ಮಾಡುತ್ತಿದ್ದೇವೆ. ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ರಸ್ತೆ, ಸೇತುವೆ, ನಿರ್ಮಾಣಕ್ಕಾಗಿ ವೆಚ್ಚವಾಗುತ್ತಿದೆ ಇವೆಲ್ಲ ಅಭಿವೃದ್ದಿಯಲ್ಲವೇ ಎಂದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್