ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 25 : ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಹೊರತರುವಲ್ಲಿ ಪ್ರತಿಭಾ ಕಾರಂಜಿ ಸಹಕಾರಿಯಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಹೇಳಿದರು.
ಶಿಕ್ಷಣ ಇಲಾಖೆ ವತಿಯಿಂದ ಸಂತ ಜೋಸೆಫ್ ಕಾನ್ವೆಂಟ್ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಗಾಟಿಸಿ ಮಾತನಾಡಿದರು.
ಮಕ್ಕಳಲ್ಲಿರುವ ಸೃಜನಶೀಲತೆ, ಕಲೆ, ಸಾಹಿತ್ಯ, ಸಂಸ್ಕøತಿಯನ್ನು ಗುರುತಿಸಿ ಹೊರತೆಗೆಯುವ ಕೆಲಸ ಶಿಕ್ಷಕರುಗಳಿಂದ ಮಾತ್ರ ಸಾಧ್ಯ. ಪ್ರತಿಭಾ ಕಾರಂಜಿಯ ಮೂಲಕ ಮಕ್ಕಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಪರಿಣಾಮಕಾರಿಯಾಗಲಿದೆ. ಕ್ಲಸ್ಟರ್ ಹಂತದಿಂದ ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸುವ ಅವಕಾಶಗಳು ಮಕ್ಕಳಿಗೆ ಸಿಗುತ್ತದೆ. 2002 ರಲ್ಲಿ ಆರಂಭಗೊಂಡ ಪ್ರತಿಭಾ ಕಾರಂಜಿ ಪ್ರತಿವರ್ಷವೂ ನಿರಂತರವಾಗಿ ನಡೆಯುತ್ತಿದೆ ಎಂದರು.
ತೀರ್ಪುಗಾರರು ಮಕ್ಕಳಲ್ಲಿನ ಕೌಶಲ್ಯವನ್ನು ಗುರುತಿಸಿ ಯಾವುದೇ ಲೋಪವಿಲ್ಲದೆ ಪ್ರಾಮಾಣಿಕವಾಗಿ ತೀರ್ಪು ನೀಡಬೇಕು ಎಂದು ಸೂಚಿಸಿದರು.
ತಾಲ್ಲೂಕಿನ ಎಂಟು ನೂರಕ್ಕೂ ಹೆಚ್ಚು ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಸೂಸಿದರು.
162 ತೀರ್ಪುಗಾರರು ಭಾಗವಹಿಸಿದ್ದರು. ನೇಗಿಲು ಹೊಡೆಯುವ ರೈತ, ಯಕ್ಷಗಾನ, ರಾಜಾವೀರ ಮದಕರಿನಾಯಕ, ಛದ್ಮವೇಷ ಹೀಗೆ ನಾನಾ ಬಗೆಯ ವೇಷಧರಿಸಿ ನೂರಾರು ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ್ದರು.