ಪ್ರತಿಭಾ ಪುರಸ್ಕಾರ : ರೆಡ್ಡಿ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

1 Min Read

 

ಸುದ್ದಿಒನ್, ಚಿತ್ರದುರ್ಗ, ಜೂನ್. 26 : ಚಿತ್ರದುರ್ಗ ಜಿಲ್ಲಾ ರೆಡ್ಡಿ ಸಂಘದ ವತಿಯಿಂದ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಲು ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಯ ರೆಡ್ಡಿ ಸಮುದಾಯದ ಮಕ್ಕಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 90% ಅಂಕಪಡೆದವರಿಗೆ, ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ 85% ಅಂಕ ಪಡೆದವರಿಗೆ ಪ್ರತಿಭಾಪುರಸ್ಕಾರ ನೀಡಲಾಗುವುದು. ವಿದ್ಯಾರ್ಥಿಗಳು ಅರ್ಜಿಯೊಂದಿಗೆ ದೃಢೀಕರಿಸಿದ ಅಂಕಪಟ್ಟಿ, ಆಧಾರ್‌ಕಾರ್ಡ್, ಟಿ.ಸಿ. ಮತ್ತು ಭಾವಚಿತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಿ ನಗರದ ಬಿ.ಡಿ. ರಸ್ತೆಯಲ್ಲಿರುವ ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನಸಂಘದ ಕಛೇರಿಗೆ ದಿನಾಂಕ:01-07-2025 ರಿಂದ 30-09-2025 ರೊಳಗಾಗಿ ಸಲ್ಲಿಸಲು ಕಾರ್ಯದರ್ಶಿಗಳಾದ ಜೆ.ಪರಶುರಾಮ ಮತ್ತು ಶ್ರೀಮತಿ ಡಿ.ಕೆ.ಶೀಲಾ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9686555383

Share This Article
Leave a Comment

Leave a Reply

Your email address will not be published. Required fields are marked *