ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನ

1 Min Read

ಸುದ್ದಿಒನ್, ಚಿತ್ರದುರ್ಗ: ಜು.07 :  ಎಚ್.ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾದಿಗ ಸಮುದಾಯದ ಎಸ್.ಎಸ್.ಎಲ್.ಸಿ,  ಪಿಯುಸಿ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು. ಜುಲೈ 10 ಕೊನೆ ದಿನಾಂಕ ಆಗಿದೆ.

ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಶೇ. 85 ಕ್ಕಿಂತ ಹೆಚ್ಚು ಅಂಕ ಗಳಿಸಿದ ಮಾದಿಗ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಚಿತ್ರದುರ್ಗ ಜಿಲ್ಲೆಯ ನಿವಾಸಿ ಆಗಿರಬೇಕು, ಚಿತ್ರದುರ್ಗ ಜಿಲ್ಲೆಯ ಶಾಲಾ-ಕಾಲೇಜ್‍ಗಳಲ್ಲಿ ಓದಿರಬೇಕು. ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಆಕರ್ಷಕ ಫಲಕ, ಶಾಲು, ಹಾರ, ಸನ್ಮಾನ ಪತ್ರದ ಜೊತೆಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುವುದು.

ಅರ್ಜಿ ಸಲ್ಲಿಸಲು ಬಯಸುವವರು ಆನ್‍ಲೈನ್ ಮೂಲಕ hanjaneyacharitabletrust.in ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ಸಮಾರಂಭದ ದಿನಾಂಕ ಹಾಗೂ ಸ್ಥಳವನ್ನು ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ನಂತರ ತಿಳಿಸಲಾಗುವುದು. ಸ್ವವಿವರದ ಜೊತೆ ಪಾಸ್ ಫೋಟೋ, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರದ ನಕಲು ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ  9743048006 ಅಥವಾ 8073050019 ಗೆ ಸಂಪರ್ಕಿಸಬಹುದು ಎಂದು ಕಾರ್ಯಕ್ರಮ ಸಂಘಟಕರಾದ ಸಿ.ಎನ್.ಕುಮಾರ್, ಎ.ನಂದೀಶ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *