Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗ ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.28 : ಚಿತ್ರದುರ್ಗ ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದ ವತಿಯಿಂದ ನಾಳೆ  (ಅಕ್ಟೋಬರ್ 29) ಪ್ರತಿಭಾ ಪುರಸ್ಕಾರ ಸಮಾರಂಭವನ್ನು ನಗರದ ತ.ರಾ.ಸು. ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

2022 – 23 ನೇ ಸಾಲಿನ ಎಸ್‌ಎಸ್‌ಎಲ್‍ಸಿ ಪರೀಕ್ಷೆಯಲ್ಲಿ ಶೇ.80 ಕ್ಕಿಂತ ಹೆಚ್ಚು ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.70 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ.

ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು
ಶ್ರೀ ಶ್ರೀ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಗಳು, ಮಾದಾರ ಚೆನ್ನಯ್ಯ ಗುರುಪೀಠ, ಚಿತ್ರದುರ್ಗ ಮತ್ತು

ಶ್ರೀಶ್ರೀಶ್ರೀ ಷಡಕ್ಷರ ಮುನಿ ಸ್ವಾಮೀಜಿ ಆದಿಜಾಂಬವ ಗುರುಪೀಠ, ಹಿರಿಯೂರು ಇವರು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ನೆರವೇರಿಸಲಿದ್ದಾರೆ.

ಪ್ರತಿಭಾನ್ವಿತರಿಗೆ ಸನ್ಮಾನವನ್ನು ಸಚಿವರಾದ
ಕೆ.ಹೆಚ್. ಮುನಿಯಪ್ಪ, ಆರ್.ಬಿ.ತಿಮ್ಮಾಪು‌ರ
ಮತ್ತು ಡಿ.ಸುಧಾಕ‌ರ್ ಮಾಡಲಿದ್ದಾರೆ.

ಅಧ್ಯಕ್ಷತೆಯನ್ನು ಚಳ್ಳಕೆರೆ ನಗರಸಭೆ ಪೌರಾಯುಕ್ತ ಸಿ.ಚಂದ್ರಪ್ಪ ವಹಿಸಿಕೊಳ್ಳುವರು.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಚಿತ್ರದುರ್ಗದ  ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಮತ್ತು‌ ಮಾಯಕೊಂಡ ಶಾಸಕ ಕೆ.ಎಸ್‌.ಬಸವಂತಪ್ಪ ಭಾಗವಹಿಸಲಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment