ಮಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ತನಿಖೆ ಶುರುವಾಗಿದೆ. ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ದಕ್ಷಿಣ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯಲ್ಲಿ ಪಿಎಫ್ಐ ಸಂಘಟನೆ ಕಾರ್ಯಕರ್ತರನ್ನು ವಿಚಾರಣೆ ಮಾಡಲಾಗುತ್ತಿದೆ.
ಇಂದು ಏಕಕಾಲಕ್ಕೆ ದಾಳಿ ನಡೆಸಿ, ಎಲೆಕ್ಟ್ರಾನಿಕ್ ಡಿವೈಸ್ ಗಳನ್ನು ವಶಪಡಿಸಿಕೊಂಡಿದ್ದಾರೆ. ನಿಷೇಧಿತ ಪಿಎಸ್ಐ ನಲ್ಲಿ ಭಾಗಿಯಾಗಿದ್ದ ಹಲವರನ್ನು ವಿಚಾರಣೆ ಮಾಡಲಾಗುತ್ತಿದೆ. ಸೋಮವಾರಪೇಟೆಯಲ್ಲೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಸಂಬಂಧಪಟ್ಟ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಪ್ರವೀಣ್ ನೆಟ್ಟಾರು ಕಳೆದ ಜುಲೈ 26 ರಂದು ಕೊಲೆಯಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುನಾರ್ ಕಟೀಲು ಹಾಗೂ ಸಚಿವರಾಗಿದ್ದ ಅಂಗಾರ ಮೇಲೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡುಸಿದ್ದರು. ಇದೀಗ ಮತ್ತೆ ಪ್ರವೀಣ್ ನೆಟ್ಟಾರು ಪ್ರಕರಣದ ತನಿಖೆ ಶುರುವಾಗಿದೆ.