ಮಂಗಳೂರು: ದುಷ್ಕರ್ಮಿಗಳಿಂದ ಹತ್ಯಗೀಡಾದ ಬಿಜೆಪಿ ಯುವ ಮೋರ್ಚಾದ ಪ್ರವೀಣ್ ನೆಟ್ಟಾರು ಮೃತದೇಹ ಹುಟ್ಟೂರಿನತ್ತ ಸಾಗಿದೆ. ಬೃಹತ್ ಮೆರವಣಿಗೆಯ ಮೂಲಕ ಮೃತದೇಹವನ್ನು ಸಾಗಿಸುತ್ತಿದ್ದಾರೆ. ಈ ಮೆರವಣಿಗೆಯಲ್ಲಿ ಬಿಜೆಪಿಯ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಮೃತದೇಹದ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ನೆಟ್ಟಾರುವಿನ ಪ್ರವೀಣ್ ಮನೆ ಹಿಂದೆ ಅಂತ್ಯಕ್ರಿಯೆ ನಡೆಸಲು ತಯಾರಿ ನಡೆಸಿದ್ದಾರೆ. ಬಿಲ್ಲವ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.
ಪ್ರವೀಣ್ ಮೃತದೇಹವನ್ನು ಮೆರವಣಿಗೆಯ ಮೂಲಕ ತೆಗೆದುಕೊಂಡು ಹೋಗುತ್ತಿದ್ದು, ಸಾವಿರಾರು ಬಿಜೆಪಿ ಕಾರ್ಯಕರ್ತರು ಕೂಡ ಈ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಪ್ರವೀಣ್ ಕುಟುಂಬಸ್ಥರ ದುಃಖ ಮುಗಿಲು ಮುಟ್ಟಿದೆ.