Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗರ್ಭಪೂರ್ವ ಹಾಗೂ ಪ್ರಸವ ಪೂರ್ವ ಲಿಂಗಪತ್ತೆ ಶಿಕ್ಷಾರ್ಹ ಅಪರಾಧ : ಡಾ. ರಂಗನಾಥ್

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ (ನ.17): ಪ್ರಸವ ಪೂರ್ವ ಮತ್ತು ಗರ್ಭಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನಿಗೆ ವಿರುದ್ಧವಾಗಿದ್ದು ಶಿಕ್ಷಾರ್ಹ ಅಪರಾಧವಾಗಿದೆ.  ಪುರುಷ-ಮಹಿಳೆಯರಲ್ಲಿ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಈ ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ರಂಗನಾಥ್ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಗರ್ಭಧಾರಣಾ ಪೂರ್ವ ಮತ್ತು ಪ್ರಸರ್ವ ಪೂರ್ವ ಲಿಂಗಪತ್ತೆ ತಂತ್ರವಿಧಾನಗಳ ನಿಷೇಧ (ಪಿಸಿ & ಪಿಎನ್‍ಡಿಟಿ) ಕಾಯ್ದೆ ಅನುಷ್ಠಾನ ಕುರಿತ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸದ್ಯ ಜಿಲ್ಲೆಯಲ್ಲಿ ಸರ್ಕಾರಿ-04 ಹಾಗೂ ಖಾಸಗಿ-53 ಸೇರಿದಂತೆ ಒಟ್ಟು 57 ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರಿ-03 ಹಾಗೂ ಖಾಸಗಿಯ 14 ಸೇರಿದಂತೆ ಒಟ್ಟು 17 ಸ್ಕ್ಯಾನಿಂಗ್ ಯಂತ್ರಗಳು ವಿವಿಧ ಕಾರಣಗಳಿಂದಾಗಿ ಸ್ಥಗಿತಗೊಂಡಿವೆ.

ಪಿಸಿ & ಪಿಎನ್‍ಡಿಟಿ ಕಾಯ್ದೆಯನ್ವಯ ನಿಯಮಾನುಸಾರ ಅನುಮತಿ ಪಡೆದು, ನಡೆಯುತ್ತಿರುವ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳು, ಪ್ರತಿಯೊಂದು ಸ್ಕ್ಯಾನಿಂಗ್ ಪ್ರಕರಣಗಳನ್ನು ಕೂಡ ರಜಿಸ್ಟರ್‍ನಲ್ಲಿ ನಮೂದಿಸಿ, ಆಯಾ ದಿನದಂದೇ ನಮೂನೆ ಎಪ್ ನಲ್ಲಿ ವರದಿಯನ್ನು ಆನ್‍ಲೈನ್‍ನಲ್ಲಿ ಸಲ್ಲಿಸಬೇಕು, ಈ ಕಾರ್ಯವನ್ನು ಮಾಡದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಯಾವುದೇ ಕಾರಣಕ್ಕೂ ಪ್ರಸವ ಪೂರ್ವ ಮತ್ತು ಗರ್ಭಪೂರ್ವ ಭ್ರೂಣಲಿಂಗ ಪತ್ತೆ ಮಾಡುವಂತಿಲ್ಲ ಅಲ್ಲದೆ, ಸ್ಕ್ಯಾನಿಂಗ್ ನಡೆಸುವ ಸ್ಥಳದಲ್ಲಿ ಯಾವುದೇ ಬಗೆಯ ಛಾಯಾಚಿತ್ರಗಳು, ದೇವರ ಫೋಟೋಗಳನ್ನು ಕೂಡ ಹಾಕುವಂತಿಲ್ಲ.

ಇವೆಲ್ಲ ನಿಯಮಗಳನ್ನು ಪ್ರತಿಯೊಂದು ಸ್ಕ್ಯಾನಿಂಗ್ ಸೆಂಟರ್‍ಗಳು ತಪ್ಪದೆ ಪಾಲಿಸಲೇಬೇಕು.  ಲಿಂಗಪತ್ತೆ ಕಾನೂನಿಗೆ ವಿರುದ್ಧವಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ.  ಉಲ್ಲಂಘಿಸಿದವರಿಗೆ 3 ವರ್ಷಗಳವರೆಗೆ ಜೈಲುಶಿಕ್ಷೆ ಹಾಗೂ 10 ಸಾವಿರ ರೂ. ಗಳ ದಂಡ ವಿಧಿಸಲಾಗುತ್ತದೆ.  ಇದರ ಜೊತೆಗೆ ವೈದ್ಯರಿಗೂ ಕೂಡ ರಾಜ್ಯ ವೈದ್ಯಕೀಯ ಮಂಡಳಿಯಿಂದ ವೈದ್ಯಕೀಯ ವೃತ್ತಿ ಮಾಡದಂತೆ ಐದು ವರ್ಷಗಳವರೆಗೆ ನಿಷೇಧ ವಿಧಿಸಲಾಗುತ್ತದೆ.

ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೌಲಭ್ಯ ಹೊಂದಿರುವ ಎಲ್ಲಾ ಸೆಂಟರ್‌ಗಳು, ಜೆನಿಟಿಕ್ ಕ್ಲಿನಿಕ್‍ಗಳು, ಜೆನಿಟಿಕ್ ಪ್ರಯೋಗಾಲಯಗಳು ಕೆಪಿಎಂಇ ನಡಿ ಜಿಲ್ಲಾ ಸಕ್ಷಮ ಪ್ರಾಧಿಕಾರದಲ್ಲಿ ನೊಂದಾಯಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.  ಸ್ಕ್ಯಾನಿಂಗ್ ಸೆಂಟರ್ ನೊಂದಣಿಗೆ 25 ಸಾವಿರ ರೂ. ಹಾಗೂ ನರ್ಸಿಂಗ್ ಹೋಂ ಅಥವಾ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಯಂತ್ರ ಅಳವಡಿಕೆ ನೊಂದಣಿಗೆ 35 ಸಾವಿರ ರೂ. ಶುಲ್ಕ ನಿಗದಿಪಡಿಸಿದ್ದು, ಅನುಮತಿಗಾಗಿ ಅರ್ಜಿ ಸಲ್ಲಿಸುವ ವಿಧಾನವನ್ನು ಸಂಪೂರ್ಣ ಆನ್‍ಲೈನ್ ಮಾಡಲಾಗಿದೆ.  ಇವರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಟ್ರೇಡ್ ಲೈಸೆನ್ಸ್ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ.  ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ 70 ದಿನಗಳ ಒಳಗಾಗಿ ವಿಲೇವಾರಿ ಮಾಡುವಂತೆ ತಂತ್ರಾಂಶದಲ್ಲಿ ವಿಧಾನವನ್ನು ಅಳವಡಿಸಲಾಗಿದೆ ಎಂದರು.

ಹೆಲ್ತ್ ಮ್ಯಾನೇಜ್‍ಮೆಂಟ್ ಇನ್‍ಫಾರ್ಮೇಷನ್ ಸಿಸ್ಟಂ (ಹೆಚ್‍ಎಂಐಎಸ್) ನಲ್ಲಿ ದಾಖಲಾಗಿರುವ ಅಂಕಿ-ಅಂಶಗಳನ್ವಯ ಜಿಲ್ಲೆಯಲ್ಲಿ ಕಳೆದ ಏಳು ವರ್ಷಗಳ ಅವಧಿಯಲ್ಲಿನ ಲಿಂಗಾನುಪಾತ ಗಮನಿಸಿದಾಗ ಏರಿಳಿಕೆ ಕಂಡುಬಂದಿದೆ.  2016-17 ರಲ್ಲಿ ಒಂದು ಸಾವಿರ ಗಂಡು ಮಗು ಜನನಕ್ಕೆ 948 ಹೆಣ್ಣು ಮಗು ಜನನ ದಾಖಲಾಗಿದೆ.  ಅದೇ ರೀತಿ 2017-18 ರಲ್ಲಿ 941, 18-19 ರಲ್ಲಿ 916, 19-20 ರಲ್ಲಿ 928, 20-21 ರಲ್ಲಿ 950, 21-22 ರಲ್ಲಿ 945 ಹಾಗೂ ಈ ವರ್ಷ ಇದುವರೆಗೆ 966 ದಾಖಲಾಗುವ ಮೂಲಕ ಲಿಂಗಾನುಪಾತ ವೃದ್ಧಿಯಲ್ಲಿ ಭರವಸೆಯನ್ನು ಮೂಡಿಸಿದೆ.

ಲಿಂಗಾನುಪಾತ ವೃದ್ಧಿಗೆ ಪಿಸಿ & ಪಿಎನ್‍ಡಿಟಿ ಕಾಯ್ದೆ ಕುರಿತಂತೆ ಐಇಸಿ ಚಟುವಟಿಕೆಗಳು, ಪೋಸ್ಟರ್ ಹಾಗೂ ಕರಪತ್ರಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಂಡು, ಜಿಲ್ಲೆಯಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗುವುದು ಎಂದು ಡಿಹೆಚ್‍ಒ ಡಾ. ರಂಗನಾಥ್ ಹೇಳಿದರು.

ಸಭೆಯಲ್ಲಿ  ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಸೌಮ್ಯ, ಸದಸ್ಯರುಗಳಾದ ಡಾ. ರೇಣುಪ್ರಸಾದ್, ಡಾ. ಸತ್ಯನಾರಾಯಣ, ಎಂ. ಉಮೇಶ್, ಕೆ.ಪಿ. ಮೀನಾಕ್ಷಿ, ಗಾಯಿತ್ರಿ ಶಿವರಾಂ, ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ಮೈರಾಡ ಸಂಸ್ಥೆಯ ಸುನೀಲ್ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

ಮಾಜಿ ಸಿಎಂ ಬಿಎಸ್ವೈ ವಿರುದ್ದ ಸಮರ ಸಾರಿದ್ರಾ ಪರಮಾಪ್ತ ಶಾಸಕ ಎಂ.ಚಂದ್ರಪ್ಪ. ?

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮಾ.28 : ಪುತ್ರನಿಗೆ ಬಿಜೆಪಿ ಟಿಕೇಟ್ ಕೈ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ ಅಸಮಧಾನ ವ್ಯಕ್ತಪಡಿಸಿದ್ದು,

error: Content is protected !!