ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 24 : ಕಲಾವಿದರ ರಾಜ್ಯ ಸಮ್ಮೇಳನ ನಡೆಸುವ ಕುರಿತು ಕರ್ನಾಟಕ ರತ್ನ ಡಾ.ರಾಜ್‍ಕುಮಾರ್ ಸಾಂಸ್ಕøತಿಕ ಕಲಾ ಪರಿಷತ್ ರಾಜ್ಯ ಶಾಖೆ ಚಿತ್ರದುರ್ಗ ವತಿಯಿಂದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಪರಿಷತ್‍ನ ರಾಜ್ಯಾಧ್ಯಕ್ಷ ಪರಶುರಾಮ್ ಗೊರಪ್ಪರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಕಲೆ ಮತ್ತು ಕಲಾವಿದರ ಸಮಸ್ಯೆಗಳನ್ನು ಆಲಿಸಿ ಸರ್ಕಾರದಿಂದ ಸಿಗುವ ಸೌಲತ್ತುಗಳನ್ನು ಪಡೆಯಬೇಕಾಗಿರುವುದರಿಂದ ರಾಜ್ಯ ಸಮ್ಮೇಳನ ನಡೆಸಲು ತೀರ್ಮಾನಿಸಿದ್ದೇವೆ. ನಾಡಿನ ನಾನಾ ಭಾಗಗಳಲ್ಲಿರುವ ಕಲಾವಿದರುಗಳನ್ನು ಹಾಗೂ ಡಾ.ರಾಜ್‍ಕುಮಾರ್ ಕುಟುಂಬದವರನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಗುವುದೆಂದರು.
ಕರ್ನಾಟಕ ರತ್ನ ಡಾ.ರಾಜ್‍ಕುಮಾರ್ ಸಾಂಸ್ಕøತಿಕ ಕಲಾ ಪರಿಷತ್ ರಾಜ್ಯ ಶಾಖೆ ಕಾರ್ಯಾಧ್ಯಕ್ಷ ಹೆಚ್.ಶಿವಣ್ಣ, ಗೌರವಾಧ್ಯಕ್ಷ ಕೆ.ಬಿ.ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಯಲ್ಲೇಶ್, ರಾಜ್ಯ ಸಂಚಾಲಕ ದಿವುಶಂಕರ್, ಖಜಾಂಚಿ ಡಿ.ಜಗದೀಶ್, ಗೌರವ ಕಾರ್ಯದರ್ಶಿ ತಿಪ್ಪೇಸ್ವಾಮಿ ಹಾಗೂ ಮಹಿಳಾ ಪದಾಧಿಕಾರಿಗಳಾದ ಯಶೋಧಮ್ಮ, ಉಷಾದೇವಿ, ಶಾಂತಮ್ಮ, ಕಮಲಮ್ಮ, ಸುನಿತಾಗಾಂಧಿ, ಶಾರದಮ್ಮ ಇವರುಗಳು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















