ಎಲ್ಲೆಲ್ಲೂ ಕಾಂತಾರ ಸಿನಿಮಾದ್ದೇ ಅಬ್ಬರ. ಒಂದು ಸಲ ಸಿನಿಮಾವನ್ನು ಥಿಯೇಟರ್ ನಲ್ಲಿಯೇ ನೋಡಿ ಕಣ್ಣು ತುಂಬಿಕೊಳ್ಳಿ ಎಂಬುದು ಸಿನಿಮಾ ನೋಡಿದವರ ಅಭಿಪ್ರಾಯವಾಗಿದೆ. ಅಷ್ಟೇ ಅಲ್ಲ ಸಿನಿಮಾ ರಿಲೀಸ್ ಆಗಿ ಒಂಭತ್ತು ದಿನವಾಗಿದ್ದರು ಸಿನಿಮಾ ಮೇಲಿನ ವ್ಯಾಮೋಹ ಕಡಿಮೆಯಾಗಿಲ್ಲ. ನೋಡಿದವರು ಕೂಡ ಮತ್ತೆ ಮತ್ತೆ ನೋಡಬೇಕು ಎನ್ನುತ್ತಿದ್ದಾರೆ. ಹೀಗಾಗಿ ವೀಕೆಂಡ್ ಟಿಕೆಟ್ ಗೆ ಫುಲ್ ಡಿಮ್ಯಾಂಡ್ ಕ್ರಿಯೇಟ್ ಆಗಿದೆ.
ಕಾಂತಾರ ಸಿನಿಮಾ ಕನ್ನಡದ ಮಟ್ಟಿಗೆ ಮಾತ್ರವಲ್ಲ ಎಲ್ಲಾ ಭಾಷೆಯವರು ನೋಡಲೇಬೇಕಾದ ಸಿನಿಮಾ. ಎಲ್ಲಾ ಭಾಷೆಯಲ್ಲಿಯೂ ಒಟ್ಟಿಗೆ ರಿಲೀಸ್ ಮಾಡಬಹುದಿತ್ತು ಎಂಬ ಅಭಿಪ್ರಾಯ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಇದೀಗ ಎಲ್ಲಾ ಭಾಷೆಯಲ್ಲೂ ಕಾಂತಾರ ರಿಲೀಸ್ ಮಾಡಲು ತಯಾರಿ ಆರಂಭವಾಗಿದೆ. ಕಾಂತಾರ ಸಿನಿಮಾವನ್ನು ಮೊದಲಿಗೆ ಹಿಂದಿ ಭಾಷೆಯಲ್ಲಿ ಡಬ್ ಮಾಡಲಾಗಿದ್ದು, ಹಿಂದಿ ಅವತರಣಿಕೆ ಇದೇ ತಿಂಗಳ 14ರಿಂದ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಸಿದ್ಧವಾಗಿದೆ.
ಇನ್ನು ಕಾಂತಾರ ಸಿನಿಮಾಗೆ ಇರುವ ಡಿಮ್ಯಾಂಡ್ ಅಷ್ಟಿಷ್ಟಲ್ಲ. ಇದನ್ನು ಅರಿತ ಹೊಂಬಾಳೆ ಇದೀಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡಲಿದೆ. ಜನರ ಬೇಡಿಕೆಗೆ ತಕ್ಕಂತೆ ತಮಿಳು, ತೆಲುಗು ಮತ್ತು ಮಲಯಾಳಂನಲ್ಲೂ ಸಿನಿಮಾ ಬಿಡುಗಡೆ ಮಾಡಲಿದ್ದಾರೆ. ಈ ಸಂತಸದ ವಿಚಾರವನ್ನು ಹೊಂಬಾಳೆ ಬ್ಯಾನರ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…