ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 11 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‍ರವರ ಸೂಚನೆ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣರವರ ಆದೇಶದಂತೆ ಮೊಳಕಾಲ್ಮುರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಟಿ.ನಾಗಭೂಷಣ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಟಿ.ಜಿಯಾವುಲ್ಲಾ ಇವರುಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ತಿಳಿಸಿದರು.
ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಬಿ.ಟಿ.ನಾಗಭೂಷಣ ಹಾಗೂ ಟಿ.ಜಿಯಾವುಲ್ಲಾ ಇವರುಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿ ಮಾತನಾಡಿದ ಎಂ.ಕೆ.ತಾಜ್‍ಪೀರ್ 140 ವರ್ಷಗಳ ಇತಿಹಾಸವುಳ್ಳ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಹುದ್ದೆ ಪಡೆದುಕೊಂಡರು ಖುಷಿ ಪಡಬೇಕು. ದೇಶದ ಸ್ವಾತಂತ್ರಕ್ಕಾಗಿ ಬ್ರಿಟೀಷರ ವಿರುದ್ದ ಹೋರಾಡಿದ್ದು, ಕಾಂಗ್ರೆಸ್. ಮೊಳಕಾಲ್ಮುರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಟಿ.ನಾಗಭೂಷಣ ಹಾಗೂ ಪ್ರಧಾನ ಕಾರ್ಯದರ್ಶಿ ಟಿ.ಜಿಯಾವುಲ್ಲಾ ಇವರುಗಳು ಅನೇಕ ವರ್ಷಗಳಿಂದಲೂ ಪಕ್ಷಕ್ಕಾಗಿ ಸೇವೆ ಸಲ್ಲಿಸುತ್ತಿರುವುದನ್ನು ಗುರುತಿಸಿ ನೇಮಕ ಮಾಡಲಾಗಿದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರೆಹಳ್ಳಿ ಉಲ್ಲಾಸ್, ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷ ಅಬ್ದುಲ್ಲಾ ಷಾವಲಿ, ಚಾಂದ್‍ಪೀರ್, ಮುದಸಿರ್‍ನವಾಜ್, ಬಾಬು ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.











