ಹಿರಿಯೂರು ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗಕ್ಕೆ ಅಧ್ಯಕ್ಷರುಗಳ ನೇಮಕ

suddionenews
1 Min Read

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ, (ಜ.20): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣರವರ ಆದೇಶದಂತೆ ಹಿರಿಯೂರು ನಗರ ಹಿಂದುಳಿದ ವರ್ಗಗಳ ವಿಭಾಗದ ಬ್ಲಾಕ್ ಅಧ್ಯಕ್ಷರಾಗಿ ಡಿ.ಗಂಗಾಧರ್ ಇವರನ್ನು ನೇಮಕ ಮಾಡಲಾಗಿದೆ.

ಕೆ.ಪಿ.ಸಿ.ಸಿ. ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷ ಕೆ.ಅಬ್ದುಲ್ ಜಬ್ಬಾರ್‍ರವರ ಆದೇಶದಂತೆ ಹಿರಿಯೂರು ತಾಲ್ಲೂಕು ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾಗಿ ಮೊಹಮದ್ ಫಕ್ರುದ್ದಿನ್ ಇವರನ್ನು ನೇಮಕ ಮಾಡಲಾಗಿದೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಡಿ.ಗಂಗಾಧರ್ ಹಾಗೂ ಮೊಹಮದ್ ಫಕ್ರುದ್ದಿನ್ ಇವರುಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ ಮಾತನಾಡಿ ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಾಗಿರುವುದರಿಂದ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುವಂತೆ ಸೂಚಿಸಿದರು.

ಕೆ.ಪಿ.ಸಿ.ಸಿ.ಸದಸ್ಯ ಅಮೃತೇಶ್ವರಸ್ವಾಮಿ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷ ಅಬ್ದುಲ್ಲ, ಉಪಾಧ್ಯಕ್ಷ ಕೆ.ಪಿ.ಬಾಬು, ಸೈಯದ್ ಅಲ್ಲಾಭಕ್ಷಿ, ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿರಮೇಶ್, ಮಹಮದ್‍ಸಾಬ್ ಜಿ.ಆರ್.ಹಳ್ಳಿ, ನ್ಯಾಯವಾದಿಗಳಾದ ಸುದರ್ಶನ್, ಬೀಸ್ನಳ್ಳಿ ಜಯಣ್ಣ ಈ ಸಂದರ್ಭದಲ್ಲಿ ಉಪಸರ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *