ನವದೆಹಲಿ: ಜುಲೈ 18ರಂದು ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವವರು ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ. ಜೂನ್ 29ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮೊದಲ ದಿನವೇ ಹನ್ನೊಂದು ನಾಮಪತ್ರ ಸಲ್ಲಿಕೆಯಾಗಿದೆ. ಜೊತೆಗೆ ಒಂದು ನಾಮಪತ್ರ ತಿರಸ್ಕೃತಗೊಂಡಿದೆ ಎನ್ನಲಾಗಿದೆ. ಇನ್ನು ರಾಷ್ಟ್ರಪತಿ ಸ್ಥಾನಕ್ಕಾಗಿ ದೆಹಲಿ, ಮಹಾರಾಷ್ಟ್ರ, ಬಿಹಾರ, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ನಾಮಪತ್ರಗಳು ಸಲ್ಲಿಕೆಯಾಗಿದೆ. ಇನ್ನು ಬಿಹಾರದ ಸಾರನ್ ನಿಂದ ಲಾಲೂ ಪ್ರಸಾದ್ ಯಾದವ್ ನಾಮಪತ್ರ ಸಲ್ಲಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ ನಿಂದಲೂ ನಾಮಪತ್ರ ಸಲ್ಲಿಕೆಯಾಗಲು ಯೋಜನೆ ನಡೆದಿದೆ. ಯಾರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಮಮತಾ ಬ್ಯಾನರ್ಜಿ ಈ ಹಿಂದೆ ಸಭೆ ನಡೆಸಿದ್ದರು. ಸಭೆಯಲ್ಲಿ ಎನ್ ಸಿ ಪಿ ಪಕ್ಷದ ಶರದ್ ಪವಾರ್ ಅವರ ಹೆಸರು ಸೂಚಿಸಿದ್ದರು. ಆದರೆ ಅವರೆ ತಿರಸ್ಕಾರ ಮಾಡಿದ್ದಾರೆ. ಸದ್ಯಕ್ಕೆ ಇನ್ನು ಅಭ್ಯರ್ಥಿಯ ಹೆಸರು ಘೋಷಿಸಿಲ್ಲ.
ಇನ್ನು ಪ್ರತಿ ಅಭ್ಯರ್ಥಿಯೂ 15 ಸಾವಿರ ಠೇವಣಿ ಇಡಬೇಕಾಗುತ್ತದೆ. ಅಭ್ಯರ್ಥಿಯೂ ನಾಮನಿರ್ದೇಶನವನ್ನು ನಿಗದಿತ ನಮೂನೆಯಲ್ಲಿ ಮಾಡಬೇಕಾಗುತ್ತದೆ. ಕನಿಷ್ಠ 50 ಮತದಾರರು ಪ್ರತಿಪಾದಕರಾಗಿ ಮತ್ತು ಕನಿಷ್ಟ 50 ಮತದಾರರು ದ್ವಿತೀಯಕರಾಗಿ ಚಂದದಾರರಾಗಬೇಕಾಗುತ್ತದೆ.