Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ದುರುಪಯೋಗಕ್ಕೆ ತಡೆ – ಸರ್ಕಾರದ ಮಹತ್ವದ ಪರಿಷ್ಕರಣೆ ಪ್ಲಾನ್

---Advertisement---

ಬೆಂಗಳೂರು.ಜೂನ್.20ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಅನರ್ಹರ ಪಾಲಾಗುತ್ತಿರುವುದನ್ನು ತಡೆಯಲು ಮತ್ತು ಸರ್ಕಾರದ ಬೊಕ್ಕಸಕ್ಕೆ ಆಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಈಗ ನಿಯಮಗಳ ಮರುಪರಿಶೀಲನೆಗೆ ಬಿಗ್ ಪ್ಲಾನ್ ರೂಪಿಸಲಾಗಿದೆ. ಯೋಜನೆಗಳ ದುರುಪಯೋಗವನ್ನು ತಪ್ಪಿಸಿ, ಕೇವಲ ಅರ್ಹರಿಗೆ ಮಾತ್ರ ಇದರ ಸೌಲಭ್ಯ ಸಿಗುವಂತೆ ಮಾಡಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ.

ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ದಾಖಲೆಗಳನ್ನು ಮರುಪರಿಶೀಲಿಸಲು ಅಧಿಕಾರಿಗಳು ನೇರವಾಗಿ ಮನೆ ಮನೆಗೆ ತೆರಳಿ ಸರ್ವೆ ನಡೆಸಲಿದ್ದಾರೆ.

ಫಲಾನುಭವಿಗಳು ತಮ್ಮ ರೇಷನ್ ಕಾರ್ಡ್, ಆಧಾರ್, ವೋಟರ್ ಐಡಿ, ಇ-ಕೆವೈಸಿ ಆಗಿರುವ ಬ್ಯಾಂಕ್ ಪಾಸ್ ಬುಕ್, ಆದಾಯ ಪ್ರಮಾಣ ಪತ್ರ ಹಾಗೂ ಐಟಿ/ಜಿಎಸ್ಟಿ ಪಾವತಿಯ ವಿವರಗಳೂ ಸೇರಿದಂತೆ ಒಟ್ಟು 10 ಪ್ರಮುಖ ಅಂಶಗಳ ಮಾಹಿತಿಯನ್ನು ಒದಗಿಸಬೇಕು. ತಾವು ನೀಡಿದ ಮಾಹಿತಿ ಸುಳ್ಳಾಗಿದ್ದರೆ ಕಾನೂನು ಕ್ರಮಕ್ಕೆ ಬದ್ಧರಾಗಿರುವುದಾಗಿ ಸ್ವಯಂ ಘೋಷಣೆ ಮಾಡಿಕೊಳ್ಳಬೇಕಾಗುತ್ತದೆ.

ಹೊರರಾಜ್ಯದ ಮತದಾರರು ಹಾಗೂ ಶ್ರೀಮಂತರು ಈ ಯೋಜನೆಗಳ ಲಾಭ ಪಡೆಯುವುದನ್ನು ತಡೆಯಲಾಗುವುದು. ಈಗಾಗಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆರ್ಥಿಕವಾಗಿ ಸಬಲರಾಗಿರುವವರು ಸ್ವಯಂಪ್ರೇರಿತರಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಬೇಕೆಂದು ಕರೆ ನೀಡಿದ್ದಾರೆ.

ಉಚಿತ ಬಸ್ ಪ್ರಯಾಣದ ದುರುಪಯೋಗ ತಡೆಯಲು ಸ್ಮಾರ್ಟ್ ಕಾರ್ಡ್ ಹಾಗೂ ಸ್ಕ್ಯಾನಿಂಗ್ ವ್ಯವಸ್ಥೆಯನ್ನು ತರಲು ಆಲೋಚಿಸಲಾಗುತ್ತಿದೆ. ಪ್ರವಾಸ ಹಾಗೂ ದೇವಸ್ಥಾನಗಳಿಗೆ ಅನಗತ್ಯವಾಗಿ ಅಲೆಯುವವರಿಗಿಂತ ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು ಮತ್ತು ಗಾರ್ಮೆಂಟ್ಸ್ ನೌಕರರಂತಹ ನೈಜ ದುಡಿಯುವ ವರ್ಗಕ್ಕೆ ಇದರ ಸೌಲಭ್ಯ ಸಿಗಬೇಕು ಎಂಬ ಒತ್ತಾಯ ಕೇಳಿಬಂದಿದೆ. ಯೋಜನೆಗಳನ್ನು ದಿಢೀರನೆ ರದ್ದುಗೊಳಿಸಿದರೆ ಸಾರ್ವಜನಿಕ ಆಕ್ರೋಶ ಎದುರಾಗಬಹುದು ಎಂಬ ಕಾರಣಕ್ಕೆ, ಸರ್ಕಾರವು ಅತ್ಯಂತ ಜಾಗರೂಕತೆಯಿಂದ ಮರುಪರಿಶೀಲನೆ ಪ್ರಕ್ರಿಯೆಯ ಮೂಲಕ ಅನರ್ಹರನ್ನು ಪಟ್ಟಿಯಿಂದ ಹೊರಹಾಕಲು ಸಜ್ಜಾಗಿದೆ.

Join WhatsApp

Join Now

Join Telegram

Join Now