ಸುದ್ದಿಒನ್,ಮೇ.09:ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಗಗನಕ್ಕೇರುತ್ತಿರುವ ಬೆನ್ನಲ್ಲೇ, ಭಾರತದ ಗ್ರಾಹಕರಿಗೆ ಇಂಧನ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು (OMC) ಎದುರಿಸುತ್ತಿರುವ ಭಾರೀ ಆರ್ಥಿಕ ನಷ್ಟವನ್ನು ಸರಿದೂಗಿಸಲು ಮೇ 15ರ ಒಳಗಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಕಚ್ಚಾ ತೈಲ ದರ ಏರಿಕೆಯಾಗಿದ್ದರೂ ದೇಶದಲ್ಲಿ ಚಿಲ್ಲರೆ ಮಾರಾಟ ದರ ಸ್ಥಿರವಾಗಿರುವುದರಿಂದ, ತೈಲ ಕಂಪನಿಗಳು ತಿಂಗಳಿಗೆ ಅಂದಾಜು 30,000 ಕೋಟಿ ರೂ. ನಷ್ಟ ಅನುಭವಿಸುತ್ತಿವೆ. ಮಧ್ಯಪ್ರಾಚ್ಯದಲ್ಲಿನ ಯುದ್ಧದಂತಹ ಪರಿಸ್ಥಿತಿ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿ ಉಂಟಾಗಿರುವ ಪೂರೈಕೆ ಅಡಚಣೆಯಿಂದಾಗಿ, ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 70 ಡಾಲರ್‌ನಿಂದ 126 ಡಾಲರ್‌ಗೆ ಏರಿಕೆಯಾಗಿದೆ.
ಒಂದು ವೇಳೆ ಸರ್ಕಾರ ಬೆಲೆ ಏರಿಕೆಗೆ ಅನುಮೋದನೆ ನೀಡಿದರೆ, ಪೆಟ್ರೋಲ್ ಮತ್ತು ಡೀಸೆಲ್ ಲೀಟರ್ ಗೆ 4 ರಿಂದ 5 ರೂ. ಏರಿಕೆ. ಎಲ್‌ಪಿಜಿ (LPG) ಸಿಲಿಂಡರ್ ಪ್ರತಿ ಸಿಲಿಂಡರ್‌ಗೆ 40 ರಿಂದ 50 ರೂ. ಏರಿಕೆಯಾಗುವ ಸಾಧ್ಯತೆ ಇದೆ.
ಜಾಗತಿಕ ಮಟ್ಟದಲ್ಲಿ ತೈಲ ಆಘಾತ ಉಂಟಾಗಿದ್ದರೂ, ಭಾರತವು ಇದುವರೆಗೆ ಬೆಲೆಗಳನ್ನು ಸ್ಥಿರವಾಗಿರಿಸುವಲ್ಲಿ ಯಶಸ್ವಿಯಾಗಿದೆ. ಪ್ರಸ್ತುತ ಸರ್ಕಾರ ಮತ್ತು ತೈಲ ಕಂಪನಿಗಳು ಪೆಟ್ರೋಲ್ ಮೇಲೆ ಪ್ರತಿ ಲೀಟರ್‌ಗೆ 24 ರೂ. ಹಾಗೂ ಡೀಸೆಲ್ ಮೇಲೆ 30 ರೂ. ಗಳಷ್ಟು ಹೊರೆಯನ್ನು ತಾವೇ ಭರಿಸುತ್ತಿವೆ. ಅಬಕಾರಿ ಸುಂಕ ಕಡಿತದ ಹೊರತಾಗಿಯೂ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ತೀವ್ರ ಆರ್ಥಿಕ ಒತ್ತಡದಲ್ಲಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















