Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್ : ವಾಣಿಜ್ಯ ಸಿಲಿಂಡರ್ ದರ 46 ರೂಪಾಯಿ ಹೆಚ್ಚಳ

---Advertisement---

ಸುದ್ದಿಒನ್,ಬೆಂಗಳೂರು,ಜೂನ್.1:ಪೆಟ್ರೋಲ್, ಡೀಸೆಲ್ ಹಾಗೂ ಸಿಎನ್‌ಜಿ ಬೆಲೆ ಏರಿಕೆಯಿಂದ ಈಗಾಗಲೇ ಹೈರಾಣಾಗಿರುವ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಹೋಟೆಲ್, ರೆಸ್ಟೋರೆಂಟ್‌ ಸೇರಿದಂತೆ ವಿವಿಧ ಉದ್ಯಮಗಳಲ್ಲಿ ಬಳಸುವ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ತೈಲ ಕಂಪನಿಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳ ಮಾಡಿದ್ದು, ಪರಿಷ್ಕೃತ ದರಗಳು ಇಂದಿನಿಂದಲೇ ಅನ್ವಯವಾಗಲಿವೆ. ದೇಶದ ಪ್ರಮುಖ ನಗರಗಳಲ್ಲಿ ಕಮರ್ಷಿಯಲ್ ಸಿಲಿಂಡರ್ ಬೆಲೆ ಗಗನಕ್ಕೇರಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನ ಗ್ರಾಹಕರಿಗೂ ಇದರ ಬಿಸಿ ಜೋರಾಗಿಯೇ ತಟ್ಟಿದೆ.

ಬೆಂಗಳೂರಿನಲ್ಲಿ 19 ಕೆಜಿಯ ವಾಣಿಜ್ಯ ಸಿಲಿಂಡರ್ ದರದಲ್ಲಿ 46 ರೂ. ಹೆಚ್ಚಳವಾಗಿದ್ದು, ಒಟ್ಟು ಬೆಲೆ 3,198 ರೂ. ತಲುಪಿದೆ. ಇದು ಹೋಟೆಲ್ ಮಾಲೀಕರು ಮತ್ತು ಸಣ್ಣ ಉದ್ಯಮಿಗಳಲ್ಲಿ ತಲ್ಲಣ ಮೂಡಿಸಿದೆ. ರಾಜಧಾನಿಯಲ್ಲೂ ಸಿಲಿಂಡರ್ ಬೆಲೆ 42 ರೂ. ಏರಿಕೆಯಾಗಿದ್ದು, ಇನ್ಮುಂದೆ ಗ್ರಾಹಕರು ಪ್ರತಿ ಸಿಲಿಂಡರ್‌ಗೆ 3,113.5 ರೂ. ನೀಡಬೇಕಾಗುತ್ತದೆ.

ದೇಶದಲ್ಲೇ ಇಲ್ಲಿ ಅತ್ಯಂತ ಗರಿಷ್ಠ ಪ್ರಮಾಣದ ಏರಿಕೆ ಕಂಡುಬಂದಿದೆ. ಬರೋಬ್ಬರಿ 53.5 ರೂ. ಹೆಚ್ಚಳದೊಂದಿಗೆ ಸಿಲಿಂಡರ್ ದರ 3,255.5 ರೂ. ಗೆ ಬಂದು ನಿಂತಿದೆ. ಕೇವಲ ದೊಡ್ಡ ಸಿಲಿಂಡರ್ ಮಾತ್ರವಲ್ಲದೆ, ಬೀದಿಬದಿ ವ್ಯಾಪಾರಿಗಳು ಹೆಚ್ಚಾಗಿ ಬಳಸುವ 5 ಕೆಜಿಯ ಸಣ್ಣ (FTL) ಸಿಲಿಂಡರ್ ಬೆಲೆಯನ್ನೂ ಸಹ 11 ರೂ. ಹೆಚ್ಚಿಸಲಾಗಿದೆ. ಇದರಿಂದಾಗಿ ಸಣ್ಣ ಸಿಲಿಂಡರ್ ಬೆಲೆ ಈಗ 821.5 ರೂ. ಆಗಿದ್ದು, ಸಣ್ಣ ಪುಟ್ಟ ಕ್ಯಾಟರಿಂಗ್ ಹಾಗೂ ವ್ಯಾಪಾರಸ್ಥರ ಹೊಟ್ಟೆಯ ಮೇಲೆ ಹೊಡೆದಂತಾಗಿದೆ.

ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿರುವುದರಿಂದ ಹೋಟೆಲ್‌ಗಳಲ್ಲಿ ತಿಂಡಿ-ತಿನಿಸುಗಳು, ಕಾಫಿ ಮತ್ತು ಟೀ ದರಗಳು ದುಬಾರಿಯಾಗುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಸಾರ್ವಜನಿಕರಿಗೆ, ಈ ಹೊಸ ದರ ಏರಿಕೆಯು ಪರೋಕ್ಷವಾಗಿ ಮತ್ತಷ್ಟು ಆರ್ಥಿಕ ಹೊರೆಯಾಗಲಿದೆ.

Join WhatsApp

Join Now

Join Telegram

Join Now