Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಜನತೆಗೆ ಬೆಲೆ ಏರಿಕೆ ಬಿಸಿ : ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಖಾಸಗಿ ಬಸ್ ದರವೂ ಶೇ. 20ರಷ್ಟು ಹೆಚ್ಚಳ!

---Advertisement---

ಸುದ್ದಿಒನ್,ಬೆಂಗಳೂರು,ಮೇ.15: ರಾಜ್ಯದ ಜನಸಾಮಾನ್ಯರಿಗೆ ಒಂದಾದ ಮೇಲೊಂದರಂತೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಇತ್ತೀಚೆಗಷ್ಟೇ ಇಂಧನ ದರ ಏರಿಕೆಯಿಂದ ತತ್ತರಿಸಿದ್ದ ಸಾರ್ವಜನಿಕರಿಗೆ, ಇದೀಗ ಖಾಸಗಿ ಬಸ್ ಮಾಲೀಕರು ಮತ್ತೊಂದು ದೊಡ್ಡ ಶಾಕ್ ನೀಡಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯನ್ನೇ ನೆಪವಾಗಿಸಿಕೊಂಡು ಖಾಸಗಿ ಬಸ್ ಪ್ರಯಾಣ ದರವನ್ನು ಶೇ. 20 ರಿಂದ 30 ರಷ್ಟು ಹೆಚ್ಚಿಸಲಾಗಿದೆ.

ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ನಟರಾಜ್ ಶರ್ಮ ಅವರು ಈ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಇಂಧನ ಬೆಲೆಗಳು ಸತತವಾಗಿ ಗಗನಕ್ಕೇರುತ್ತಿರುವುದರಿಂದ ಬಸ್ ನಿರ್ವಹಣೆ ಮಾಡುವುದು ನಮಗೆ ಅಸಾಧ್ಯವಾಗಿದೆ. ಕಾರ್ಮಿಕರ ವೇತನ ಮತ್ತು ಇತರೆ ವೆಚ್ಚಗಳನ್ನು ಸರಿದೂಗಿಸಲು ಅನಿವಾರ್ಯವಾಗಿ ಶೇ. 20 ರಿಂದ 30 ರಷ್ಟು ದರ ಹೆಚ್ಚಳ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.

ಈ ಹಠಾತ್ ನಿರ್ಧಾರದಿಂದ ವಾರಾಂತ್ಯದಲ್ಲಿ ಊರುಗಳಿಗೆ ತೆರಳುವವರು ಹಾಗೂ ನಿತ್ಯ ಕೆಲಸಕ್ಕೆ ಖಾಸಗಿ ಬಸ್ಗಳನ್ನೇ ಅವಲಂಬಿಸಿರುವ ಉದ್ಯೋಗಿಗಳು ಕಂಗಾಲಾಗಿದ್ದಾರೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ನಲುಗಿರುವ ಜನರಿಗೆ, ಸಾರಿಗೆ ವೆಚ್ಚದ ಈ ಏರಿಕೆ ‘ಗಾಯದ ಮೇಲೆ ಉಪ್ಪು ಸವರಿದಂತಾಗಿದೆ’.

ಮುಂಗಡವಾಗಿ ಟಿಕೆಟ್ ಬುಕ್ ಮಾಡಿದ್ದ ಪ್ರಯಾಣಿಕರಿಗೂ ಈ ಹೊಸ ದರ ಅನ್ವಯವಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದೆ. ಒಟ್ಟಾರೆಯಾಗಿ, ಜನಸಾಮಾನ್ಯರ ಬದುಕು ದಿನೇ ದಿನೇ ದುಬಾರಿಯಾಗುತ್ತಿರುವುದು ಆತಂಕ ಮೂಡಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now