ನವದೆಹಲಿ: ದೇಶದಲ್ಲಿ ಮತ್ತೆ ಕೊರೋನಾ ಆತಂಕ ಮನೆ ಮಾಡುತ್ತಿದೆ. ನೆಮ್ಮದಿಯಾಗಿ ಇನ್ಮೇಲಾದರೂ ಬದುಕಬಹುದು ಎಂದುಕೊಳ್ಳುವಾಗಲೇ ಕೊರೊನಾ ನಾಲ್ಕನೇ ಅಲೆ ಆರಂಭವಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಇಂದು ಸಭೆ ನಡೆಸಿ, 3T ಸೂತ್ರ ತಿಳಿಸಿದೆ.

ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಸ್ಯಾನಿಟೈಸರ್ ಬಳಕೆಗೆ ಸೂಚನೆ ನೀಡಲಾಗಿದೆ. ಜೊತೆಗೆ ಬೂಸ್ಟರ್ ಡೋಸ್ ಪಡೆಯದವರು, ಬೂಸ್ಟರ್ ಡೋಸ್ ಪಡೆದಿಲ್ಲ. ಎಲ್ಲರೂ ಬೂಸ್ಟರ್ ಡೋಸ್ ತೆಗೆದುಕೊಳ್ಳಲು ಸಲಹೆ ನೀಡಿದ್ದಾರೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ ಅವರು, ಸಾರ್ವಜನಿಕರಲ್ಲಿ ಮತ್ತೆ ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಕೋವಿಡ್ ಮಾರ್ಗಸೂಚಿಗಳ ಜಾಗೃತಿ ಮೂಡಿಸಲು ಸೂಚಿಸಲಾಗಿದೆ. ಜನಸಂದಣಿ ಪ್ರದೇಶಗಳಲ್ಲಿ ಮಾಸ್ಕ್ ಧರಿಸಲು ಸೂಚನೆ ನೀಡಿದ್ದಾರೆ. ಈ ಹಿಂದೆ ಕೊರೊನಾ ಅಲೆಗಳಲ್ಲಿ ಭಾರತ ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಂಡು ಅಪಾಯದಿಂದ ಪಾರಾಗಿದೆ. ಆದರೆ ಬೂಸ್ಟರ್ ಡೋಸ್ ಹೆಚ್ಚಿನ ಮಂದಿ ಪಡೆದಿಲ್ಲ. ಸಾರ್ವಜನಿಕರು ಹೆಚ್ಚಾಗಿ ಬೂಸ್ಟರ್ ಡೋಸ್ ಪಡೆಯಲು ಸೂಚಿಸಬೇಕು. ಜೊತೆಗೆ ಕೋವಿಡ್ ಟೆಸ್ಟ್ ಸಂಖ್ಯೆ ಹೆಚ್ಚಿಸಬೇಕು. ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಬೇಕು ಎಂದು ತಿಳಿಸಿದ್ದಾರೆ.

