Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನ ಪ್ರಶ್ನೆಗಳಿಗೆ ಉತ್ತರಿಸಬೇಕಾದವರು ಪ್ರದಾನಿ ಮೋದಿ, ಐಟಿ ಸೆಲ್ ನವರಲ್ಲ : ಸಿದ್ದರಾಮಯ್ಯರಿಂದ ಮತ್ತೆ ಪ್ರಶ್ನೆಗಳ ಸುರಿಮಳೆ

Facebook
Twitter
Telegram
WhatsApp

 

ಬೆಂಗಳೂರು: ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದೇನೆ. ಇದಕ್ಕೆ ಉತ್ತರ ನೀಡಬೇಕಾಗಿರುವವರು ಪ್ರಧಾನಿ ನರೇಂದ್ರ ಮೋದಿಯವರೇ ಹೊರತು ಬಿಜೆಪಿಯ ಐಟಿ ಸೆಲ್ ಅಲ್ಲ. ಸನ್ಮಾನ್ಯ ಪ್ರಧಾನಿಯವರು ಒಪ್ಪಿ ದಿನ ಮತ್ತು ಸ್ಥಳವನ್ನು ನಿಗದಿಪಡಿಸಿದರೆ ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸಿದ್ದನಿದ್ದೇನೆ ಎಂದು ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ.

 

1.ನಾಡಿಗೆ ಬರಗಾಲ ಬಂದು ಆರು ತಿಂಗಳುಗಳಾಗಿವೆ. ಬರಪರಿಹಾರದ ಕೆಲಸಗಳಿಗಾಗಿ 18,177 ಕೋಟಿ ರೂಪಾಯಿ ನೀಡಲು ಮೂರು ತಿಂಗಳುಗಳಿಂದ ಒತ್ತಾಯಿಸುತ್ತಾ ಬಂದಿದ್ದೇವೆ. ಪತ್ರ ಬರೆದಿದ್ದೇವೆ, ನಾನೇ ಖುದ್ದಾಗಿ ಹೋಗಿ ಪ್ರಧಾನಮಂತ್ರಿಯವರನ್ನು ಭೇಟಿಯಾಗಿ ನಮ್ಮ ರೈತರ ಕಷ್ಟಗಳನ್ನು ವಿವರಿಸಿದ್ದೇನೆ.. ಇಲ್ಲಿಯವರೆಗೆ ಒಂದು ಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ.

2.ಯುಪಿಎ ಸರ್ಕಾರದ 14ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ನಿಗದಿಪಡಿಸಿದ್ದ ಶೇ.4.72 ತೆರಿಗೆ ಪಾಲನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ 15ನೇ ಹಣಕಾಸು ಆಯೋಗವು ಶೇ.3.64 ಕ್ಕೆ ಇಳಿಕೆ ಮಾಡಿ ವಂಚಿಸಲಾಗಿದೆ. ಇದರಿಂದ ಕನ್ನಡಿಗರು ಕಳೆದ 4 ವರ್ಷಗಳಲ್ಲಿ ಸುಮಾರು 45,000 ಕೋಟಿ ರೂಪಾಯಿಯಷ್ಟು ಬೆವರಗಳಿಕೆಯಿಂದ ಕಟ್ಟಿದ ತೆರಿಗೆ ಹಣವನ್ನು ಕಳೆದುಕೊಂಡಿದ್ದಾರೆ.

3.ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆಗಳಿಗೆ ನೀಡುತ್ತಿರುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿತಗೊಳಿಸಲಾಗುತ್ತಿದೆ. 2021-22ರ ಅವಧಿಯಲ್ಲಿ 20 ಸಾವಿರ ಕೋಟಿ ರೂಪಾಯಿ ಇದ್ದ ಅನುದಾನ, 2022-23ರಲ್ಲಿ 13 ಸಾವಿರ ಕೋಟಿ ರೂಪಾಯಿಗೆ ಇಳಿಕೆಯಾಗಿದೆ.

4.ಕರ್ನಾಟಕಕ್ಕೆ 5,495 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವಂತೆ 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿತ್ತು. ಆದರೆ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್‌ ಅವರು ಈ ಶಿಫಾರಸ್ಸನ್ನು ತಿರಸ್ಕರಿಸಿದ್ದಾರೆ. ಆರ್ಥಿಕ ವರ್ಷ ಆರಂಭವಾಗಿ 6 ತಿಂಗಳು ಕಳೆದರೂ ಕೇಂದ್ರ ಸರ್ಕಾರದ ಸಹಯೋಗದ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಕೃಷ್ಣಾ ಮೇಲ್ದಂಡೆ ಮತ್ತು ಮಹದಾಯಿ ಯೋಜನೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ.

5.ಏಮ್ಸ್ ಸಂಸ್ಥೆ ಬೇಕೆಂಬ ಕನ್ನಡಿಗರ ಕನಸು ಇನ್ನೂ ಕನಸಾಗಿಯೇ ಉಳಿದಿದೆ. ಕನ್ನಡಿಗರು ಶ್ರಮದಿಂದ ಕಟ್ಟಿದ ಬ್ಯಾಂಕುಗಳು ವಿಲೀನದ ಹೆಸರಲ್ಲಿ ಬೇರೆ ರಾಜ್ಯಗಳ ನಷ್ಟದಲ್ಲಿರುವ ಬ್ಯಾಂಕುಗಳ ಜೊತೆ ವಿಲೀನ ಮಾಡಿ ಕನ್ನಡಿಗರಿಗೆ ದ್ರೋಹ ಬಗೆಯಲಾಯಿತು.

6.ನಮ್ಮ ಹಿರೀಕರು ಕಷ್ಟಪಟ್ಟು ನಿರ್ಮಾಣ ಮಾಡಿದ್ದ ವಿಮಾನ ನಿಲ್ದಾಣವನ್ನು ಖಾಸಗಿಯವರಿಗೆ ಮಾರಲಾಯಿತು. ಹದಿನೆಂಟು ಸಾವಿರ ಕೋಟಿ ರೂಪಾಯಿ ಬೆಂಗಳೂರು ಸಬ್‌ ಅರ್ಬನ್‌ ರೈಲು ಯೋಜನೆಗೆ ಅನುದಾನ ಇಲ್ಲದೆ ಸೊರಗಿ ಹೋಗಿದೆ. ಇನ್ನು ರಾಜ್ಯದ ಇತರೆ ರೈಲ್ವೇ ಯೋಜನೆಗಳನ್ನು ಮೂಲೆಗೆ ತಳ‍್ಳಲಾಗಿದೆ.

ತೆರೆದ ಪುಸ್ತಕದಲ್ಲಿ ಕಾಣುವ ಈ ಅನ್ಯಾಯಗಳನ್ನು ಕಂಡು ಮೌನವಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕ್ರಿಯೆಯನ್ನು ಹೇಗೆ ವ್ಯಾಖ್ಯಾನಿಸಲಿ? ಉದ್ದೇಶಪೂರ್ವಕವಾದ ನಿರ್ಲಕ್ಷ್ಯ ಎನ್ನಲೇ? ಸಹಜವಾದ ನಿದ್ರಾ ಸ್ಥಿತಿ ಎನ್ನಲೇ? ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!