Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

---Advertisement---

ಸುದ್ದಿಒನ್,ಬೆಂಗಳೂರು,ಮೇ.18: ದೇಶದ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಇಂದು ತಮ್ಮ 94ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ‘ದೊಡ್ಡಗೌಡರ’ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಡಿ ಪುತ್ರರಾದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ನಾಡಿನ ಹಾಗೂ ದೇಶದ ಗಣ್ಯಾತಿಗಣ್ಯರು ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ದೇವೇಗೌಡರಿಗೆ ವಿಶೇಷವಾಗಿ ಜನ್ಮದಿನದ ಶುಭಾಶಯ ಕೋರಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಜೀ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಸಾರ್ವಜನಿಕ ಜೀವನದಲ್ಲಿ ದೀರ್ಘಕಾಲದ ಸೇವೆಯ ಮೂಲಕ ಅವರು ರಾಷ್ಟ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ನೀತಿ ನಿಯಮಗಳ ಕುರಿತಾದ ಅವರ ಆಳವಾದ ಅರಿವು ಮತ್ತು ಹಿಂದುಳಿದ ವರ್ಗಗಳ ಸೇವೆಗಾಗಿ ಅವರಿಗಿರುವ ಬದ್ಧತೆ ಎಲ್ಲರಿಗೂ ಪರಿಚಿತವಾಗಿದೆ. ಭಗವಂತ ಅವರಿಗೆ ಸುದೀರ್ಘ ಆಯಸ್ಸು ಮತ್ತು ಉತ್ತಮ ಆರೋಗ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now