ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋ.ಮಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಇದು ಜನಸಾಮಾನ್ಯರಿಗೆ ಆತಂಕ ಉಂಟಯ ಮಾಡಿದೆ. ಈ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಅವರ ಜೊತೆಗೆ ಕುಟುಂಬದ ಇನ್ನಿಬ್ಬರಿಗೂ ಸೋಂಕು ಹರಡಿದೆ.

ಈ ಸಂಬಂಧ ಇಂದು ಪ್ರಧಾನಿ ಮೋದಿ ಸಿಎಂ ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸೂಕ್ತ ಸಲಹೆ ನೀಡಿದ್ದಾರೆ. ಇಂದು ಪ್ರಧಾನಿ ಮೋದಿ ಎಲ್ಕಾ ರಾಜ್ಯಗಳ ಸಿಎಂ ಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯಾ ರಾಜ್ಯದ ಮಾಹಿತಿ ಪಡೆದುಕೊಂಡಿದ್ದಾರೆ.
ಜನವರಿ 13ಕ್ಕೆ ಪಿಎಂ ಕೋವಿಡ್ ವರ್ಚುವಲ್ ಸಭೆ ಕರೆದಿದ್ದಾರೆ. ಅದರ ಪೂರ್ವಭಾವಿಯಾಗಿ ಇಂದು ಸಭೆ ನಡೆದಿದೆ. ಇದೆ ವೇಳೆ ಸಿಎಂ ಬೊಮ್ಮಾಯಿ ಅವರು, ಪಿಎಂಗೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಅಗತ್ಯ ಕ್ರಮ, ಲಸಿಕೆ ಅಭಿಯಾಬ ತೀವ್ರಗೊಳಿಸಿರುವ ಬಗ್ಗೆ, ತಜ್ಞರು ನೀಡಿರುವ ಸಲಹೆಗಳ ಬಗ್ಗೆಯೂ ಪ್ರಧಾನಿ ಮೋದಿ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ.
