Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಧಾನಿ ನರೇಂದ್ರಮೋದಿರವರ ಜನ್ಮದಿನ ; ಯೂತ್ ಕಾಂಗ್ರೆಸ್ ನಿಂದ ‌ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಸೆಪ್ಟೆಂಬರ್. 17 : ದೇಶದ ಪ್ರಧಾನಿ ನರೇಂದ್ರಮೋದಿರವರ ಜನ್ಮದಿನವನ್ನು ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ಒನಕೆ ಓಬವ್ವ ವೃತ್ತದಲ್ಲಿ ಗುರುವಾರ ತರಕಾರಿ ಮಾರುವ ಮೂಲಕ ರಾಷ್ಟ್ರೀಯ ನಿರುದ್ಯೋಗ ದಿನಾಚರಣೆಯನ್ನಾಗಿ ಆಚರಿಸಲಾಯಿತು.

ತಳ್ಳುಗಾಡಿಯಲ್ಲಿ ಜವಳಿಕಾಯಿ, ಎಲೆ ಕೋಸು, ಕ್ಯಾರೆಟ್, ಟಮೋಟೋ, ಆಲುಗಡ್ಡೆ, ಹಸಿಮೆಣಸಿನಕಾಯಿಯನ್ನು ಮಾರಾಟ ಮಾಡುವ ಮೂಲಕ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿರವರ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರೆಹಳ್ಳಿ ಉಲ್ಲಾಸ್ ಮಾತನಾಡಿ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ದೇಶದ ಯುವ ಜನಾಂಗವನ್ನು ನಂಬಿಸಿ ವಂಚನೆ ಮಾಡಿರುವ ಪ್ರಧಾನಿ ಮೋದಿ ಅಗ್ನಿವೀರ್ ನೇಮಕದಲ್ಲಿಯೂ ಯುವಕ/ಯುವತಿಯರಿಗೆ ಉದ್ಯೋಗದ ಆಸೆ ತೋರಿಸಿ ವಚನ ಭ್ರಷ್ಟರಾಗಿದ್ದಾರೆ. ಪದವಿ ಪಡೆದವರು ಕೆಲಸವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಮೂರನೆ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರಮೋದಿರವರು ನೀಡಿದ ಭರವಸೆಯಂತೆ ನಡೆದುಕೊಂಡಿದ್ದರೆ ಇಷ್ಟೊತ್ತಿಗೆ 24 ಕೋಟಿ ಉದ್ಯೋಗ ನೀಡಬೇಕಿತ್ತು. ಡಿಗ್ರಿ ಪಡೆದವರು ಟೀ, ತರಕಾರಿ ಮಾರುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ 105 ದಿನಗಳಲ್ಲಿ 70 ಸಾವಿರ ಉದ್ಯೋಗಗಳ ಸೃಷ್ಠಿಯಾಗಿದೆ. ಯುವ ಪೀಳಿಗೆ ರಾಜ್ಯ ಮತ್ತು ದೇಶದ ಬೆನ್ನೆಲುಬೆನ್ನುವ ಕಾಳಜಿಯಿದೆ. ಕಾಂಗ್ರೆಸ್‍ಗೆ ಬಡವರು, ದಲಿತರು, ಶೋಷಿತರು, ನಿರುದ್ಯೋಗಿಗಳ ಕಷ್ಟ ಗೊತ್ತಿದೆ. ಕೋಮುವಾದಿ ಬಿಜೆಪಿ. ಜಾತಿ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತ ಕಾಲಹರಣ ಮಾಡುತ್ತಿದೆ ಎಂದರು.

ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಶ್ಚಿತ್(ಚಿಂಟು) ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್, ಸೈಯದ್ ಸೈಫುಲ್ಲಾ, ಇಂಜುಮಾಮ್
ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಆದರ್ಶ್ ಶಾಮಣ್ಣ, ಗ್ರಾಮಾಂತರ ಅಧ್ಯಕ್ಷ ಮಹಂತೇಶ್, ಪದಾಧಿಕಾರಿಗಳಾದ ಯಾಸಿನ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now