ಬೆಂಗಳೂರು: ಪ್ರಧಾನಿ ಮೋದಿ ಅವರು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಹೈಕಮಾಂಡ್ ನಾಯಕರು ರಾಜ್ಯಕ್ಕೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಹಾಗೇ ಪ್ರಧಾನಿ ಮೋದಿ ಕೂಡ ಈಗಾಗಲೇ ಹಲವು ಬಾರಿ ರಾಜ್ಯಕ್ಕೆ ಈಗಾಗಲೇ 6 ಸಲ ಭೇಟಿ ನೀಡಿ ಹೋಗಿದ್ದಾರೆ. ಮತ್ತೆ ನಾಳೆ ಭೇಟಿ ನೀಡುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ.
ನಾಳೆ ಬೆಂಗಳೂರು ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಕೆಆರ್ ಪುರಂ ಹಾಗೂ ವೈಟ್ ಫೀಲ್ಡ್ ನಡುವಿನ ಮೆಟ್ರೊಗೆ ಚಾಲನೆ ನೀಡಲಿದ್ದಾರೆ. ಮುದ್ದೇನಹಳ್ಳಿಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜನ್ನು ಉದ್ಘಾಟನೆ ಮಾಡಲಿದ್ದಾರೆ. ಬಳಿಕ ದಾವಣಗೆರೆಗೆ ತೆರಳಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ.
ಮಧ್ಯಾಹ್ನ 3.20ಕ್ಕೆ ಬೆಂಗಳೂರಿನಿಂದ ದಾವಣಗೆರೆಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ3.30ಕ್ಕೆ ದಾವಣಗೆರೆಯಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ದಾವಣಗೆರೆಯಿಂದ ಕಾರ್ಯಕ್ರಮ ಮುಗಿಸಿ ಸಂಜೆ 5 ಗಮನಟೆಯ ವೇಳೆ ಶಿವಮೊಗ್ಗದತ್ತ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿಂದ ದೆಹಲಿಗೆ ತೆರಳಲಿದ್ದಾರೆ.





GIPHY App Key not set. Please check settings