Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಪೂರ್ಣ ಸೇವೆ ಒದಗಿಸಲು ಖಾಸಗಿ ಬಸ್ ಗಳನ್ನು ಉಪಯೋಗಿಸಿಕೊಳ್ಳಬೇಕಂತೆ : ಸರ್ಕಾರಕ್ಕೆ ಮನವಿ

---Advertisement---

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ಮ ಘೋಷಣೆ ಮಾಡಿದ್ದಂತ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಐದು ಗ್ಯಾರಂಟಿಗಳನ್ನು ಯಾವಾಗಿಂದ ಜಾರಿಗೆ ಬರಲಿದೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗಿದೆ. ಅದರಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಜೂನ್ 11ರಿಂದ ಜಾರಿಗೆ ತರಲಾಗುತ್ತಿದೆ.‌ ಈ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಬಸ್ ಮಾಲೀಕರು ಸರ್ಕಾರಕ್ಕೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ಲಕ್ಷುರಿ ಬಸ್ ಮತ್ತು ಸೆಮಿ ಲಕ್ಷುರಿ ಬಸ್ ಹೊರತುಪಡಿಸಿ, ಇನ್ನುಳಿದ ಎಲ್ಲಾ ಬಸ್ ಗಳಲ್ಲೂ ಉಚಿತ ಪ್ರಯಾಣ ಮಾಡಬಹುದು. ಆದರೆ 12 ಸಾವಿರ ನಾರ್ಮಲ್ ಸರ್ಕಾರಿ ಬಸ್ ಗಳು ಸದ್ಯಕ್ಕೆ ಲಭ್ಯವಿದೆ. ಇಷ್ಟು ಬಸ್ ಗಳಿಂದ ಸರ್ಕಾರಕ್ಕೆ ಸಂಪೂರ್ಣವಾಗಿ ಸೇವೆ ಒದಗಿಸುವುದಕ್ಕೆ ಸಾಧ್ಯವಿಲ್ಲ. ಪ್ರತಿದಿನ ಹೆಚ್ಚಿನದಾಗಿ ಮಹಿಳೆಯರು ಕೂಡ ಪ್ರಯಾಣ ಮಾಡುತ್ತಾರೆ. ಹೀಗಾಗಿ ಯಶಸ್ವಿಯಾಗಿ ಈ ಯೋಜನೆಯನ್ನು ಜಾರಿಗೆ ತರುವುದಕ್ಕೆ ಆಗಲ್ಲ.

ಜೊತೆಗೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನದಾಗಿ ಸರ್ಕಾರಿ ಬಸ್ ಸಂಚಾರ ಮಾಡಲ್ಲ. ಎಷ್ಟೋ ಹಳ್ಳಿಗಳಿಗೆ ಸರ್ಕಾರಿ ಬಸ್ ಹೋಗಲ್ಲ. ಇದರಿಂದಾಗಿ ಖಾಸಗಿ ಬಸ್ ಗಳ ಸಹಾಯದೊಂದಿಗೆ ನಿಮ್ಮ ಯೋಜನೆಯನ್ನು ಯಶಸ್ವಿಯಾಗುವಂತೆ ಮಾಡಿಕೊಳ್ಳಿ ಎಂದು ಖಾಸಗಿ ಬಸ್ ಫೆಡರೇಷನ್, ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...