ದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ಈ ವೇಳೆ ಬೃಹತ್ ಪಾ್ಯಾತ್ರೆ ನಡೆಸಿದ್ದಾರೆ.
ರಾಹುಲ್ ಗಾಂಧಿ ಪರ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆದಿದ್ದಾರೆ. ಹಕವು ಕಾಂಗ್ರೆಸ್ ನಾಯಕರನ್ನು ಠಾಣೆಗೆ ಕೃದೊಯ್ದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ ಗಾಂಧಿ ಪೊಲೀಸರ ಬಳಿ ವಿಚಾರಿಸಲು ಹೋದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ.
ಹೀಗಾಗಿ ಪ್ರಿಯಾಂಕ ಗಾಂಧಿ ಜೊತೆಗೆ ಕಾಂಗ್ರೆಸ್ ನಾಯಕರೆಲ್ಲಾ ಸೇರಿ ರಘುಪತಿ ರಾಘವ ಹಾಡು ಹಾಡುತ್ತಾ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಅತ್ತ ಇಡಿ ಅಧಿಕಾರಿಗಳು ರಾಹುಲ್ ಗಾಂಧಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ದೆಹಲಿಯಲ್ಲಿ ಮಾತ್ರವಲ್ಲ ಬೆಂಗಳೂರಿನಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿಯ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.