ಚಿತ್ರದುರ್ಗ,ಸುದ್ದಿಒನ್: ರಾಜ್ಯ ವಿಧಾನಸಭಾ ಚುನಾವಣೆ ರಂಗೇರಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಹೈಕಮಾಂಡ್ ನಾಯಕರನ್ನು ರಾಜ್ಯಕ್ಕೆ ಕರೆಸಿ ಪ್ರಚಾರ ನಡೆಸುತ್ತಿದ್ದಾರೆ. ಇದೀಗ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ನಾಳೆ(ಏ.26) ಹಿರಿಯೂರು ನಗರಕ್ಕೆ ಭೇಟಿ ಕೊಡಲಿದ್ದಾರೆ. ಪ್ರಿಯಾಂಕ ಗಾಂಧಿ ಅವರು ಇದೇ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಪ್ರಿಯಾಂಕ ಗಾಂಧಿಯವರನ್ನು ಅಭ್ಯರ್ಥಿ ಡಿ ಸುಧಾಕರ್ ಅವರು ಅದ್ಧೂರಿಯಾಗಿ ಸ್ವಾಗತ ಮಾಡಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಹುಳಿಯಾರು ರಸ್ತೆಯಿಂದ ಗಾಂಧಿ ವೃತ್ತ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಿ ಸುಧಾಕರ್ ಅವರು, ನಾಲ್ಕು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಮೂರು ಬಾರಿ ಜಯಶಾಲಿಯಾಗಿದ್ದಾರೆ. ಈ ಬಾರಿಯೂ ಸ್ಪರ್ಧೆ ನಡೆಸುತ್ತಿದ್ದು, ಪ್ರಿಯಾಂಕ ಗಾಂಧಿ, ಈ ಬಾರಿ ಸುಧಾಕರ್ ಪರ ಪ್ರಚಾರ ನಡೆಸಲಿದ್ದಾರೆ.





GIPHY App Key not set. Please check settings