ಗೌರಿ-ಗಣೇಶ ಹಬ್ಬದಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ವಿಧಾನಗಳು : ಇಲ್ಲಿದೆ ಮಾಹಿತಿ

2 Min Read

ದಾವಣಗೆರೆ; ಆ.30 ; ರಾಜ್ಯಾದ್ಯಂತ ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಓಪಿ ಗಣೇಶ ವಿಗ್ರಹಗಳ ಮಾರಾಟ, ಉತ್ಪಾದನೆ ಹಾಗೂ ವಿಸರ್ಜನೆ ನಿಷೇಧಿಸಿಲಾಗಿದ್ದು. ಗೌರಿ-ಗಣೇಶ ಹಬ್ಬದಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಸಂಭ್ರಮ, ಸಡಗರದಿಂದ ಹಬ್ಬ ಆಚರಿಸಿ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಅನುಸರಿಸಬೇಕಾದ ವಿಧಾನಗಳು :  ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣ ರಹಿತ, ಮಣ್ಣಿನ ಅಥವಾ ಇತರೇ ಪರಿಸರ ಸ್ನೇಹಿ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ, ನಂತರ ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಬೇಕು. ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಉಳಿದಿರುವ ಪಿ.ಓ.ಪಿ, ರಾಸಾಯನಿಕ ಬಣ್ಣದ ವಿಗ್ರಹಗಳನ್ನು ತನಿಖೆ ಮಾಡಿ ವಶಕ್ಕೆ ಪಡೆದು ಒಂದೇ ಸ್ಥಳದಲ್ಲಿ ವಿಲೇವಾರಿ ಮಾಡುವಂತೆ ಸೂಕ್ತ ಕ್ರಮ ವಹಿಸುವುದು.

ಗಣೇಶ ಉತ್ಸವ ಆಚರಿಸುವ ಸಾರ್ವಜನಿಕರಿಗೆ ಹಾಗೂ ಸ್ಥಳೀಯ ಸಮಿತಿಗಳಿಗೆ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಸ್ಥಳೀಯ ಸಂಸ್ಥೆಗಳು ಮಾಹಿತಿ ನೀಡಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನಾ ಸಮಿತಿಯವರು ಉತ್ಸವಕ್ಕೆ ಸಂಬಂಧಿಸಿದ ಅನುಮತಿ, ಧ್ವನಿವರ್ಧಕ ಹಾಗೂ ಇತರೆ ಅನುಮತಿ ಪಡೆದುಕೊಳ್ಳಬೇಕು. ಗಣೇಶ ಪೆಂಡಾಲಗಳಲ್ಲಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳಾದ ಬಲೂನ್, ಪ್ಲಾಸ್ಟಿಕ್ ಸ್ಟಿಕ್‍ಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್‍ಗಳು, ಪ್ಲಾಸ್ಟಿಕ್ ಐಸ್ ಕ್ರೀಮ್ ಸ್ಟಿಕ್‍ಗಳು, ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟೈರೀನ್ (ಥರ್ಮೋಕೋಲ್) ಬಳಸದಂತೆ ನಿಗಾವಹಿಸುವುದು.
ಹಾಗೂ ಎಲ್ಲಾ ರೀತಿಯ ಪ್ಲಾಸ್ಟಿಕ್ ಕ್ಯಾರಿಬ್ಯಾಗ್‍ಗಳು, ಅಂಟಿಕೊಳ್ಳುವ ಫಿಲ್ಡ್‍ಗಳು, ಡೈನಿಂಗ್ ಟೇಬಲ್ ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಟ್ರಾಗಳು, ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳು, ಪ್ಲಾಸ್ಟಿಕ್ ಪ್ಲೇಟ್‍ಗಳು, ಪ್ಲಾಸ್ಟಿಕ್ ಕಪ್‍ಗಳು ಮತ್ತು ಲೋಟಗಳು, ಫೆÇೀರ್ಕ್, ಚಮಚ, ಚಾಕುಗಳು ಪ್ಲಾಸ್ಟಿಕ್ ಟ್ರೇಗಳು, ಸ್ವೀಟ್ ಬಾಕ್ಸ್‍ಗಳು, ಆಮಂತ್ರಣ ಪತ್ರಗಳು, ಸ್ಟ್ರೀಟ್ ಪ್ಯಾಕೆಟ್‍ಗಳ ಸುತ್ತ ಸುತ್ತುವ ಪದರ ಅಥವಾ ಪ್ಯಾಕಿಂಗ್ ಫಿಲ್ಡ್ ಗಳು ಮತ್ತು ಪ್ಲಾಸ್ಟಿಕ್ ಸ್ಪೀಕರ್ ಗಳನ್ನು ಬಳಸದಂತೆ ಕ್ರಮವಹಿಸುವುದು.

ಭಾರಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತಗೊಂಡಂತಹ ಯಾವುದೇ ರೀತಿಯ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಿಸಿದ ಗಣೇಶ ವಿಗ್ರಹಗಳು ಹಾಗೂ ಭಾರಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತಗೊಂಡಂತಹ ಯಾವುದೇ ರೀತಿಯ ಇತರೇ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಾದ ವಿಗ್ರಹಗಳ ಉತ್ಪಾದನೆ, ಮಾರಾಟ ಮತ್ತು ಯಾವುದೇ ನೀರಿನ ಮೂಲಗಳಲ್ಲಿ ವಿಸರ್ಜಿಸುವುದನ್ನು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ನಿಷೇಧಿಸಲಾಗಿದೆ.
ನಾವೀನ್ಯತೆಯುಳ್ಳ ಪರಿಸರ ಸ್ನೇಹಿ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಹಾಗೂ ವಿಸರ್ಜನಾ ವಿಧಾನಗಳ ಕುರಿತು ಸಾರ್ವಜನಿಕರಿಗೆ ಸ್ಥಳೀಯ ಸಂಸ್ಥೆಗಳಿಂದ ಹೆಚ್ಚಿನ ಪ್ರಚಾರ ಕೈಗೊಳ್ಳಲು ಮತ್ತು ಸಾರ್ವಜನಿಕವಾಗಿ ಅನಧಿಕೃತ ಪ್ಲೆಕ್ಸ್, ಪ್ಲಾಸ್ಟಿಕ್ ಬ್ಯಾನರ್‍ಗಳ ಹಾವಳಿ ಕುರಿತಂತೆ ಮತ್ತು ಪಿ.ಓ.ಪಿ ಗೌರಿ- ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟ ಮಾಡುವವರ ಮಾಹಿತಿ ಸಂಗ್ರಹಿಸಲು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *