Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

‘ಕುವೆಂಪು ವೃತ್ತ’ ನಾಮಕರಣಕ್ಕೆ ಪ್ರಕ್ರಿಯೆ ಆರಂಭ; ಆಕ್ಷೇಪಣೆ ಸಲ್ಲಿಕೆಗೆ 30 ದಿನ ಗಡುವು

---Advertisement---

ಚಿತ್ರದುರ್ಗ. ಆ.03: ನಗರದ ಶ್ರೀ ಚೆನ್ನಕೇಶವಸ್ವಾಮಿ ಬಡಾವಣೆ ಹಾಗೂ ಮಲ್ಲಯ್ಯ ಬಡಾವಣೆಯ ಮಧ್ಯಭಾಗದಲ್ಲಿರುವ ನಾಲ್ಕು ಕೂಡು ರಸ್ತೆಗಳ ಸ್ಥಳಕ್ಕೆ ‘ಕುವೆಂಪು ವೃತ್ತ’ ಎಂದು ನಾಮಕರಣ ಮಾಡಲು ನಗರಸಭೆ ನಿರ್ಧರಿಸಿದೆ.

ಚಿತ್ರ ಡಾನ್ ಬೋಸ್ಕೊ ಕಾಲೇಜು ಬಳಿ ಇರುವ ಕುವೆಂಪು ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘವು ಸಲ್ಲಿಸಿದ್ದ ಮನವಿ ಪುರಸ್ಕರಿಸಿ, ಜಿಲ್ಲಾಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕರ್ನಾಟಕ ಪೌರಸಭೆಗಳ ಅಧಿಕಾರಿಗಳು (ಮಾಗದರ್ಶಿ ನಕಲು ಮಂಜೂರಾತಿ ಮತ್ತು ಇತರೆ ನಿಯಮಗಳು) 1966ರ ನಿಯಮ 39ರ ಪ್ರಕಾರ, ಈ ನಾಮಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಲಹೆ ಹಾಗೂ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕರು ಅಥವಾ ಸಂಘ-ಸಂಸ್ಥೆಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಪ್ರಕಟಣೆ ಹೊರಡಿಸಿದ 30 ದಿನಗಳ ಒಳಗಾಗಿ ಚಿತ್ರದುರ್ಗ ನಗರಸಭೆ ಪೌರಾಯುಕ್ತರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬೇಕಾಗಿದೆ. ನಿಗದಿತ ಅವಧಿ ಮುಗಿದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now