ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ. 16 : ನಗರದ ಜೆಸಿಆರ್ ಬಡಾವಣೆಯಲ್ಲಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ಜ.18 ರಂದು ಶೋಭಾಯಾತ್ರೆ ಕಾರ್ಯಕ್ರಮ ನಡೆಯಲಿದೆ.
ಜನವರಿ 18 ರಂದು ಮಧ್ಯಾಹ್ನ 3:00 ಗಂಟೆಯಿಂದ ಸಂಜೆ 8:00 ಗಂಟೆಯವರೆಗೂ ಪೂರ್ಣ ಕುಂಭ ಹೊತ್ತ ಮಹಿಳೆಯರು, ವಿವಿಧ ವೇಷ-ಭೂಷಣ ಧರಿಸಿದ ಮಕ್ಕಳು, ಬಡಾವಣೆಯ ಹಲವಾರು ನಾಗರೀಕರು, ಮತ್ತು ಶಾರದಾ ಬ್ರಾಸ್ ಬ್ಯಾಂಡ್ನ ದೇಶಭಕ್ತಿಗೀತೆಗಳ ನಾದದೊಂದಿಗೆ ವಿ.ಪಿ.ಬಡಾವಣೆ 3ನೇ ಕ್ರಾಸ್ನಿಂದ ವಿ.ಪಿ.ಬಡಾವಣೆ 2ನೇ ಕ್ರಾಸ್, ಜೆ.ಸಿ.ಆರ್ ಬಡಾವಣೆ 3ನೇ ಕ್ರಾಸ್, ಜೆ.ಸಿ.ಆರ್ ಸರ್ಕಲ್, ಜೆ.ಸಿ.ಆರ್ 5ನೇ ಅಥವಾ ಜೆ.ಸಿ.ಆರ್ 7ನೇ ಕ್ರಾಸ್ನಿಂದ ಸಭಾ ಕಾರ್ಯಕ್ರಮ ನಡೆಯುವ ಜೆ.ಸಿ.ಆರ್ ಬಡಾವಣೆಯ ಗಣಪತಿ ದೇವಸ್ಥಾನದ ಬಳಿ ಶೋಭಾಯಾತ್ರೆ ಮುಕ್ತಾಯಗೊಳ್ಳುತ್ತದೆ.
ನಂತರ ಎರಡು ಗಂಟೆಗಳ ಕಾಲ ವೇದಿಕೆ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಜೆ.ಸಿ.ಆರ್.ಗಣಪತಿ ದೇವಸ್ಥಾನ ಮುಂಭಾಗ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಹೊಳ್ಳ ಭಾಗವಹಿಸುವರೆಂದು ಹಿಂದೂ ಸಂಗಮ ಆಯೋಜನ ಸಮಿತಿ ಅಧ್ಯಕ್ಷ ನವೀನ್ ಚಾಲುಕ್ಯ ತಿಳಿಸಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







