Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜ.18 ರಂದು ಶೋಭಾಯಾತ್ರೆ : ನವೀನ್ ಚಾಲುಕ್ಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 16 : ನಗರದ ಜೆಸಿಆರ್ ಬಡಾವಣೆಯಲ್ಲಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ಜ.18 ರಂದು ಶೋಭಾಯಾತ್ರೆ ಕಾರ್ಯಕ್ರಮ ನಡೆಯಲಿದೆ.

ಜನವರಿ 18 ರಂದು ಮಧ್ಯಾಹ್ನ 3:00 ಗಂಟೆಯಿಂದ ಸಂಜೆ 8:00 ಗಂಟೆಯವರೆಗೂ ಪೂರ್ಣ ಕುಂಭ ಹೊತ್ತ ಮಹಿಳೆಯರು, ವಿವಿಧ ವೇಷ-ಭೂಷಣ ಧರಿಸಿದ ಮಕ್ಕಳು, ಬಡಾವಣೆಯ ಹಲವಾರು ನಾಗರೀಕರು, ಮತ್ತು ಶಾರದಾ ಬ್ರಾಸ್ ಬ್ಯಾಂಡ್‌ನ ದೇಶಭಕ್ತಿಗೀತೆಗಳ ನಾದದೊಂದಿಗೆ ವಿ.ಪಿ.ಬಡಾವಣೆ 3ನೇ ಕ್ರಾಸ್‌ನಿಂದ ವಿ.ಪಿ.ಬಡಾವಣೆ 2ನೇ ಕ್ರಾಸ್, ಜೆ.ಸಿ.ಆರ್ ಬಡಾವಣೆ 3ನೇ ಕ್ರಾಸ್, ಜೆ.ಸಿ.ಆರ್ ಸರ್ಕಲ್, ಜೆ.ಸಿ.ಆರ್ 5ನೇ ಅಥವಾ ಜೆ.ಸಿ.ಆರ್ 7ನೇ ಕ್ರಾಸ್‌ನಿಂದ ಸಭಾ ಕಾರ್ಯಕ್ರಮ ನಡೆಯುವ ಜೆ.ಸಿ.ಆರ್ ಬಡಾವಣೆಯ ಗಣಪತಿ ದೇವಸ್ಥಾನದ ಬಳಿ ಶೋಭಾಯಾತ್ರೆ ಮುಕ್ತಾಯಗೊಳ್ಳುತ್ತದೆ.
ನಂತರ ಎರಡು ಗಂಟೆಗಳ ಕಾಲ ವೇದಿಕೆ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಜೆ.ಸಿ.ಆರ್.ಗಣಪತಿ ದೇವಸ್ಥಾನ ಮುಂಭಾಗ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಹೊಳ್ಳ ಭಾಗವಹಿಸುವರೆಂದು ಹಿಂದೂ ಸಂಗಮ ಆಯೋಜನ ಸಮಿತಿ ಅಧ್ಯಕ್ಷ ನವೀನ್ ಚಾಲುಕ್ಯ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...