ಬೆಂಗಳೂರು: ಪರಿಷತ್ ನಲ್ಲಿ ಮತಾಂತರ ನಿಷೇಧ ಬಿಲ್ ಅಂಗೀಕಾರ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಅನೇಕ ಬಿಲ್ ಗಳನ್ನು ಚರ್ಚೆ ಮಾಡದೆಯೇ ಅಂಗಿಕರಿಸಲಾಗುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೊಂದಲದ ವಾತಾವರಣ ಸೃಷ್ಟಿಸಿ ಬಿಲ್ ಪಾಸ್ ಮಾಡುತ್ತಿದ್ದಾರೆ. ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ರಕ್ಷಣೆ ವಿಧೇಯಕ ತಂದಿದ್ದರು. ಪರಿಷತ್ ನಲ್ಲಿ ನಿನ್ನೆ ಆ ವಿಧೇಯಕವನ್ನು ಅಂಗೀಕರಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.