ಚಿತ್ರದುರ್ಗ. ಏ.16: ಚಿತ್ರದುರ್ಗ ಜಿಲ್ಲೆಯಲ್ಲಿ ತೀವ್ರತರನಾದ ಬರಗಾಲ ಆವರಿಸಿದೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಕೊಳವೆಬಾವಿಗಳಲ್ಲಿ ದಿನದಿಂದ ದಿನಕ್ಕೆ ನೀರಿನ ಪ್ರಮಾಣ ಗಣನೀಯವಾಗಿ ಕುಸಿಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವುದು ಜಿಲ್ಲಾಡಳಿತದ ಪ್ರಥಮ ಆದ್ಯತೆಯಾಗಿದೆ.
ಖಾಸಗಿ ಕೊಳವೆಬಾವಿ ಮಾಲೀಕರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ, ನೀರು ಮಾರಾಟ ಮಾಡುವುದನ್ನು ಉದ್ದಿಮೆ ಮಾಡಿಕೊಂಡಿದ್ದಾರೆ. ಜಿಲ್ಲೆಯಾದ್ಯಂತ ಅವ್ಯಹತವಾಗಿ ನೀರು ಮಾರಾಟ ಮಾಡುವ ಪ್ರಕರಣಗಳು ಕಂಡುಬರುತ್ತವೆ. ವಾಣಿಜ್ಯ ಉದ್ದೇಶಗಳಿಗೆ ನೀರು ಮಾರಾಟ ಮಾಡುವುದನ್ನು ನಿಷೇಧಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.
ಇದರ ಅನ್ವಯ ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 30(1)ಅಡಿ, ಜಿಲ್ಲಾ ವ್ಯಾಪ್ತಿಯಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ವಾಣಿಜ್ಯ ಉದ್ದೇಶಕ್ಕೆ ಕುಡಿಯುವ ನೀರು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಆದೇಶ ಉಲ್ಲಂಘಿಸುವವರು ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 51 (ಬಿ) ಮತ್ತು 57ರ ಅಡಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







