Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಳೆ ಪಿಂಚಣಿ ಯೋಜನೆ ಜಾರಿ ಸಂಬಂಧ ಸರ್ಕಾರಕ್ಕೆ ವಾರದೊಳಗೆ ವರದಿ ಸಲ್ಲಿಸುವ ಭರವಸೆ

---Advertisement---

 

ಚಿತ್ರದುರ್ಗ ಡಿ. 05:  ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆಯ ಪಿಂಚಣಿ ಯೊಜನೆಯನ್ನು ಜಾರಿಗೊಳಿಸುವ ಸಂಬಂಧ ಸರ್ಕಾರ ರಚಿಸಿರುವ ಸಮಿತಿಯು ಈಗಾಗಲೆ ವರದಿ ಸಿದ್ಧಪಡಿಸಿದ್ದು, ವರದಿಯನ್ನು ಒಂದು ವಾರದೊಳಗಾಗಿ ಸರ್ಕಾರಕ್ಕೆ ಸಲ್ಲಿಸುವ ಭರವಸೆ ನೀಡಲಾಗಿರುತ್ತದೆ.  ಅಲ್ಲದೆ ರಾಜ್ಯ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ ಸೌಲಭ್ಯ ಮಂಜೂರು ಮಾಡಿ ಆದೇಶ ಹೊರಡಿಸಿರುವ ಸರ್ಕಾರಕ್ಕೆ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಅಭಿನಂದನೆ ಸಲ್ಲಿಸುತ್ತದೆ ಎಂದು ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದ್ದಜ್ಜಿ ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ 2006 ರಿಂದ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆ (ಎನ್‍ಪಿಎಸ್) ಹೋಗಲಾಡಿಸಿ, ಈ ಹಿಂದಿನ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸುವ ಸಂಬಂಧ, ಒಪಿಎಸ್ ಜಾರಿಗೊಳಿಸಿರುವ ದೇಶದ ಇತರೆ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸಮಿತಿ ರಚಿಸಿತ್ತು.  ಸಮಿತಿಯು ಈ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ನೌಕರರ ಸಂಘ ಒತ್ತಾಯಿಸುತ್ತಲೆ ಬಂದಿತ್ತು.  ಕಳೆದ ಡಿ. 03 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ನೇತೃತ್ವದ ನಿಯೋಗವು ಎನ್‍ಪಿಎಸ್ ಸಮಿತಿಯ ಸದಸ್ಯರು ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳಾದ ಡಾ. ಎಂ.ಟಿ. ರೇಜು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಸಂದರ್ಭದಲ್ಲಿ, ಸಮಿತಿಯು ಈಗಾಗಲೆ ವರದಿ ಸಿದ್ಧಪಡಿಸಿದ್ದು, ಒಂದು ವಾರದೊಳಗೆ ಸಮಿತಿಯು ಸಭೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಭರವಸೆ ನೀಡಿರುತ್ತಾರೆ.  ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆಯಂತೆ ಒಪಿಎಸ್ ಜಾರಿಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ನೌಕರರ ಸಂಘವು ಮನವಿ ಮಾಡುತ್ತದೆ.
ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆ ಸೌಲಭ್ಯವನ್ನು ರಾಜ್ಯದ 18 ರಿಂದ 52 ವರ್ಷದೊಳಗಿನ ಮಹಿಳಾ ಸರ್ಕಾರಿ ನೌಕರರಿಗೆ ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಇದನ್ನು ರಾಜ್ಯ ಸರ್ಕಾರಿ ನೌಕರರ ಸಂಘವು ಸ್ವಾಗತಿಸಿ, ಸರ್ಕಾರಕ್ಕೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಅಭಿನಂದನೆ ಸಲ್ಲಿಸುತ್ತದೆ ಎಂದು ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದ್ದಜ್ಜಿ ಅವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...