ನವದೆಹಲಿ: ಪ್ರಧಾನಿ ಮೋದಿಯವರ ಬಗ್ಗೆ ತಿಳಿದುಕೊಳ್ಳಬೇಕೆಂಬ ಕುತೂಹಲ ಯಾರಿಗೆ ಇರಲ್ಲ ಹೇಳಿ. ಇದೀಗ ಅವರ ಜೀವನ, ಕಾರ್ಯ ಮತ್ತು ನಾಯಕತ್ವ ಪುಸ್ತಕ ಲೋಕಾರ್ಪಣೆಗೊಂಡಿದೆ. ಅದರಲ್ಲೂ ಅಂಧರು ಮೋದಿಯವರ ಜೀವನದ ಹಾದಿಯನ್ನು ತಿಳಿದುಕೊಳ್ಳಬೇಕೆಂಬ ಉದ್ದೇಶದಿಂದ ಈ ಪುಸ್ತಕವನ್ನು ಸಿದ್ಧತೆ ಮಾಡಲಾಗಿದೆ. ಹುಬ್ಬಳ್ಳಿ ಮೂಲದ ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಯು ಬ್ರೈಲ್ ಲಿಪಿಯಲ್ಲಿ ಸಿದ್ಧಪಡಿಸಿದ್ದು, ‘ಎ ಪ್ರಾಮೀಸ್ಡ್ ನೇಷನ್ ಹಾನರೇಬಲ್ ಶ್ರೀ ನರೇಂದ್ರ ಮೋದಿ- ದ ಮೇಕರ್ ಆ್ ನ್ಯೂ ಇಂಡಿಯಾ’ ಎಂಬ ಪುಸ್ತಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಲೋಕಾರ್ಪಣೆಗೊಳಿಸಿದರು.
ವಿಆರ್‌ಎಲ್ ಸಮೂಹ ಸಂಸ್ಥೆಯ ಸಹಯೋಗ ಮತ್ತು ಪ್ರಾಯೋಜಕತ್ವದಲ್ಲಿ ಈ ಪುಸ್ತಕ ಹೊರತರಲಾಗಿದೆ. ದೆಹಲಿಯ ನಾರ್ತ್ ಬ್ಲಾಕ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ವಿಆರ್‌ಎಲ್ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಆನಂದ ಸಂಕೇಶ್ವರ ಮತ್ತು ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಯ ಸಂಸ್ಥಾಪಕಿಯರಾದ ರುಷಾಲಿ ದೋಶಿ ಮತ್ತು ಯಶ್ವಿ ಭಂಡಾರಿ ಉಪಸ್ಥಿತಿಯಲ್ಲಿ ಕೇಂದ್ರ ಸಚಿವ ಅಮಿತ್ ಷಾ ಪುಸ್ತಕ ಬಿಡುಗಡೆಗೊಳಿಸಿದರು.
‘ದೇಶದ ಎರಡೂವರೆ ಲಕ್ಷ ಅಂಧ ಮಕ್ಕಳು ಹಾಗೂ ಕಣ್ಣಿನ ಸಮಸ್ಯೆ ಎದುರಿಸುತ್ತಿರುವ 7 ಕೋಟಿ ಜನರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಈ ಪುಸ್ತಕದಿಂದ ಸಾಕಷ್ಟು ಮಾಹಿತಿ ಪಡೆದುಕೊಳ್ಳಬಹುದು. ಇದು ನಿಜಕ್ಕೂ ಸಾಹಸಮಯ ಕೆಲಸ. ವಿಆರ್‌ಎಲ್ ಸಂಸ್ಥೆ ಮತ್ತು ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಗೆ ಅಭಿನಂದನೆಗಳು’ ಎಂದು ಅಮಿತ್ ಷಾ ಮೆಚ್ಚುಗೆ ವ್ಯಕ್ತಪಡಿಸಿದರು.
‘ಪ್ರಧಾನಿ ನರೇಂದ್ರ ಮೋದಿಯವರು ಕಳೆದ 10 ವರ್ಷಗಳಲ್ಲಿ ದೇಶದ ನಾಗರಿಕ ಮೌಲ್ಯ ಮತ್ತು ಸಾಂಸ್ಕೃತಿಕ ತತ್ವಗಳನ್ನು ಪುನರುಜ್ಜೀವನಗೊಳಿಸಿ, ಹೊಸ ಭಾರತದ ಸೌಧವನ್ನು ನಿರ್ಮಾಣ ಮಾಡಿದ್ದಾರೆ. ಈ ಹಾದಿಯಲ್ಲಿ ಮೋದಿಯವರು ಭಾರತದ ಅಂತರಂಗದ ಜಗತ್ತನ್ನು ಮತ್ತಷ್ಟು ಜಾಗೃತಗೊಳಿಸಿದ್ದಾರೆ’ ಎಂದು ಅಭಿಪ್ರಾಯಪಟ್ಟ ಅಮಿತ್ ಷಾ, ಈ ಪುಸ್ತಕ ಬ್ರೈಲ್ ಲಿಪಿಯಲ್ಲಿದೆ. ಮೋದಿಯವರ ಜೀವನ, ಕಾರ್ಯ, ಮಾಡಿದ ಸಾಧನೆಗಳ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…