Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನ ವಿಶೇಷ : ಆಗಸ್ಟ್-26 ರಿಂದ ಸೆಪ್ಟೆಂಬರ್-06 ರವರೆಗೆ 12 ದಿನಗಳ ಕಾಲ ಸೀರತ್ ಅಭಿಯಾನ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

 

ಸುದ್ದಿಒನ್,ಚಿತ್ರದುರ್ಗ, ಆ. 25 : ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಅಂಗವಾಗಿ ಆಗಸ್ಟ್-26 ರಿಂದ ಸೆಪ್ಟೆಂಬರ್-06 ರವರೆಗೆ 12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮವನ್ನು ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್‍ನ ಸಂಚಾಲಕರಾದ ಷಫೀವುಲ್ಲಾ ತಿಳಿಸಿದ್ದಾರೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಅಭಿಯಾನದಲ್ಲಿ ಪ್ರವಾದಿ ಮಹಮ್ಮದ್ ಜನತೆಗೆ ನೀಡಿದಂತಹ ವಿವಿಧ ನೀತಿಯ ಸಂದೇಶಗಳನ್ನು ಜನತೆಗೆ ಮುಟ್ಟಿಸುವುದು ಅಲ್ಲದೇ ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಹ ಕಾರ್ಯವನ್ನು ಮಾಡಲಾಗುವುದು.ಪ್ರವಾದಿ ಮಹಮ್ಮದ್ ರವರು ಕೇವಲ ರಾಜಕೀಯವಾಗಿ ಇರದೇ ಆಧ್ಯಾತ್ಮಿಕ, ಬೌದ್ಧಿಕ, ನೈತಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯಾಗಿದ್ದರು. ಇದೊಂದು ಅಪ್ಪಟ ಮಾನವೀಯ ಕ್ರಾಂತಿಯಾಗಿದೆ.ಅವರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಅಳವಡಿಕೆ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕಿದೆ… ಈ ವಿಷಯವನ್ನು ಸಮುದಾಯಕ್ಕೆ ತಿಳಿಸಲು 06 ಜನರ ಸಮಿತಿ ಒಂದನ್ನು ರಚನೆ ಮಾಡಿ ಪ್ರತಿ ತಾಲ್ಲೂಕು, ಗ್ರಾಮ, ಹೋಬಳಿಗಳಿಗೆ ಹೋಗುವುದರ ಮೂಲಕ ಅಲ್ಲಿನ ಜನತೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು.

ಪ್ರವಾದಿ ಮಹಮ್ಮದ್ ರವರು ಜನರಲ್ಲಿಯ ದುರಹಂಕಾರವನ್ನು ತೊಡೆದು ಹಾಕಿ ಸಹೋದರತೆಯ ಅತ್ಯುತ್ತಮ ಮಾದರಿಯನ್ನು ನಿರ್ಮಾಣ ಮಾಡಿದ್ದಾರೆ.ಗುಲಾಮಗಿರಿ ಶೋಷಿತರಿಗೆ ಪ್ರವಾದಿಯವರು ಸಮಾಜದಲ್ಲಿ ಉತ್ತಮ ನಾಯಕರಾಗಿ ಹೊರಹೊಮ್ಮಿದ್ದಾರೆ.ನ್ಯಾಯದ ಹಾದಿಯ ಮೇಲೆ ಆರ್ಥಿಕ ನೀತಿಯನ್ನು ಸ್ಥಾಪಿಸಿದ್ದಾರೆ.ಅರ್ಥ ವ್ಯವಸ್ಥೆಗೆ ಕಂಟಕವಾಗಿದ್ದ ಬಡ್ಡಿಯನ್ನು ನಿಷೇಧಿಸಿ ವಂಚನೆ, ಆರ್ಥಿಕ ಶೋಷಣೆ, ಅಕ್ರಮ ದಾಸ್ತಾನು, ಭ್ರಷ್ಟಾಚಾರ, ಸಂಪತ್ತು ಕೆಲವೇ ಜನರ ಕೈಯಲ್ಲಿರುವುದನ್ನು ನಿಷೇಧಿಸಿದ್ದರು.ಪ್ರಾಮಾಣಿಕ ವ್ಯಾಪಾರ, ದಾನ, ನ್ಯಾಯಯುತವಾದ ವೇತನ ಬಡವರು ಮತ್ತು ಹಿಂದುಳಿದವರ ಬಗ್ಗೆ ಕಾಳಜಿ ಇವುಗಳನ್ನು ಪ್ರೋತ್ಸಾಹಿಸಿದ್ದರು. ಪ್ರವಾದಿ ಮಹಮ್ಮದ್ (ಸ) ರವರ ಕುರಿತಾದ ಸತ್ಯಕ್ಕಾಗಿ, ಕರುಣೆಗಾಗಿ, ಮಾನವನ ಸಮಾ ಸಮಾಜ ನಿರ್ಮಾಣಕ್ಕಾಗಿ ಎಲ್ಲಾ ಕ್ಷೇತ್ರದಲ್ಲೂ ಕ್ರಾಂತಿಯಾಗಬೇಕೆಂದು ಅವರ ಆಶಯವಾಗಿತ್ತು. ಇವುಗಳನ್ನು ಜನತೆಗೆ ತಿಳಿಸುವ ಕಾರ್ಯವನ್ನು ಈ ಅಭಿಯಾನದಲ್ಲಿ ಮಾಡಲಾಗುವುದು ಎಂದು ತಿಳಿಸಿದರು.

ಪ್ರವಾದಿ ಮುಹಮ್ಮದ್(ಸ)ರವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿದೆ. ಅವರು ಜನರ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ರ್ಯವನ್ನು ಶುದ್ದೀಕರಿಸುವ ಮೂಲಕ ವ್ಯಕ್ತಿಗಳನ್ನು, ಸಮಾಜವನ್ನು ಪರಿವರ್ತಿಸಿದರು. ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ ಹೀಗೆ ಎಲ್ಲ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು ಎಂದರು.

ಪ್ರವಾದಿ ಮುಹಮ್ಮದ್(ಸ)ರವರು ಈ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಅಭಿಯಾನದ ಪ್ರಯುಕ್ತ, ಸಾಹಿತಿ ಹಾಗೂ ಗ್ರಂಥಕರ್ತ ಯೋಗೇಶ್ ಮಾಸ್ಟರ್ ಬರೆದ ‘ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)’ ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ ‘ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್ (ಸ)’ ಎಂಬ ಎರಡು ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸ Àಲಾಗುವುದು. ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)’ ಎಂಬ ಶೀರ್ಷಿಕೆಯಡಿ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ, ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಯಾಲಿಗಳು ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

ಪತ್ರಿಕಾ ಗೋಷ್ಟಿಯಲ್ಲಿಜುಬೇದಾಅನ್ಸರಿರಹಮತ್‍ವುಲ್ಲಾ,ಸಿರಾಜ್‍ವುದ್ದೀನ್,ಮುಸ್ತಾಕ್‍ಅಹಮದ್ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now