Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರವಾದಿ ಮಹಮದ್ ಪೈಗಂಬರ್‌ ಜನ್ಮದಿನದ ಸಂಭ್ರಮ : ರಕ್ತದಾನ ಶಿಬಿರ ಆಯೋಜನೆ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 27 : ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಪ್ರಯುಕ್ತ ನಗರದ ಕೋಟೆನಾಡು ವೆಲ್ಫೇರ್ ಫೌಂಡೇಶನ್ ವತಿಯಿಂದ ಈದ್ ಮಿಲಾದ್ ಆಚರಣೆಯ ಪ್ರಯುಕ್ತ ಬುಧವಾರ ವಿಶೇಷ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಶ್ರೀ ಶಿವಶರಣ ಮಾದಾರ ಚನ್ನಯ್ಯ ಸ್ವಾಮೀಜಿಯವರು ಕಾರ್ಯಕ್ರಮಕ್ಕೆ ಆಗಮಿಸಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ರಕ್ತದಾನಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ರಕ್ತಕ್ಕೆ ಯಾವುದೇ ತರಹದ ಜಾತಿ ಧರ್ಮ ಇರುವುದಿಲ್ಲ. ತುರ್ತು ಸಂದರ್ಭದಲ್ಲಿ ಜೀವ ಉಳಿಸುವುದಕ್ಕೆ ಆತಿ ಅಗತ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮೆದೇಹಳ್ಳಿ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರು ವಿಜಯ ಕುಮಾರ್, ಸಂದೀಪ್,
ಮುಸ್ತಾಕ್ ಅಹಮದ್, ಮುಮಿನ್, ಉಸ್ಮಾನ್, ಜಾಮಿಲ್ ಪಾಷಾ , ಜಬೀಉಲಾ, ಮತ್ತು ಇತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now