Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ವೇಶ್ಯಾವಾಟಿಕೆ : ಇಬ್ಬರ ಬಂಧನ, ಇಬ್ಬರು ಮಹಿಳೆಯರ ರಕ್ಷಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 17 : ನಗರದ ಸಂತೇ ಮೈದಾನದ ಲಾಡ್ಜ್ ನ ಮೇಲೆ ಬುಧವಾರ ದಾಳಿ ನಡೆಸಿದ ಪೊಲೀಸರು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಸಂತೆ ಮೈದಾನದ ಶಾಂತಿ ಕಂಪರ್ಟ್ಸ್ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಎಸ್.ಪಿ.ರಂಜಿತ್‌ಕುಮಾರ್ ಬಂಡಾರು, ಎ.ಎಸ್.ಪಿ. ಡಾ. ಶಿವಕುಮಾರ, ಡಿ.ವೈ.ಎಸ್.ಪಿ. ದಿನಕರ್ ಪಿ.ಕೆ. ಇವರ ಮಾರ್ಗದರ್ಶನದಲ್ಲಿ ಮಹಿಳಾ ಠಾಣೆಯ ಪಿ.ಐ. ನಯೀಂ ಅಹಮದ್ ಮತ್ತು ಸಿಬ್ಬಂದಿಯವರ ತಂಡವು ಲಾಡ್ಜ್ ಮೇಲೆ ದಾಳಿ ನಡೆಸಿ ಲಾಡ್ಜ್‌ನ ಮಾಲೀಕರಾದ ಸತೀಶ ಮತ್ತು ಲಾಡ್ಜ್‌ನ ಮ್ಯಾನೇಜರ್ ಕೃಷ್ಣ ಇವರುಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮಹಿಳಾ ಮಹಿಳಾ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ವೇಶ್ಯಾವಾಟಿಕೆಯ ಬಗ್ಗೆ ದಾಳಿ ನಡೆಸಿ,ಆರೋಪಿಗಳನ್ನು ಬಂಧಿಸಿದ ಕಾರ್ಯವನ್ನು ಚಿತ್ರದುರ್ಗ ಜಿಲ್ಲೆಯ ಎಸ್.ಪಿ. ರಂಜಿತ್‌ಕುಮಾರ್ ಬಂಡಾರು ರವರು ಶ್ಲಾಘಿಸಿರುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...